ಹೊಸ ದಿಗಂತ ವರದಿ, ಕುಶಾಲನಗರ:
ನಾಲ್ಕು ಗ್ರಾಮ ಪಂಚಾಯತಿ ವ್ಯಾಪ್ತಿಯ 4. 47ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿ ಪೂಜೆ ನೆರವೇರಿಸಿದರು.
ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ಲೋಕೋಪಯೋಗಿ ಇಲಾಖೆಗೆ ಸೇರಿದ ವಿವಿಧ ಅನುದಾನದಲ್ಲಿ ಕೂಡಿಗೆ, ಕೂಡುಮಂಗಳೂರು ಮುಳ್ಳುಸೋಗೆ,ಗುಡ್ಡೆಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಂಕ್ರಿಟ್ ರಸ್ತೆಗಳು ಮತ್ತು ಗ್ರಾಮದ ಉಪ ರಸ್ತೆ ಕಾಮಗಾರಿಗಳಿಗೆ ಶಾಸಕ ಎಂ. ಪಿ.ಅಪ್ಪಚ್ಚು ರಂಜನ್, ಆಯಾ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅಪ್ಪಚ್ಚು ರಂಜನ್, ಗ್ರಾಮಗಳ ಸಂಪರ್ಕಕ್ಕೆ ರಸ್ತೆ ಪ್ರಮುಖವಾಗಿದೆ. ಸರಕಾರವು ಗ್ರಾಮದ ಪ್ರಗತಿಗೆ ಪೂರಕವಾದ ಹೊಸ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಅದರ ಮೂಲಕ ಗ್ರಾಮಗಳನ್ನು ಅಭಿವೃದ್ಧಿಪಡಿಸಲು ಚಿಂತನೆ ಹರಿಸಲಾಗಿದೆ. ಅದರಂತೆ ಲೋಕೋಪಯೋಗಿ, ಮತ್ತು ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಶಾಸಕರ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವುದರ ಮೂಲಕ ಗ್ರಾಮಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಕೂಡಿಗೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಳಾ ಪ್ರಕಾಶ್, ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ರಮೇಶ್ ಮುಳ್ಳುಸೋಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಚಲುವರಾಜ್ ಉಪಾಧ್ಯಕ್ಷ ಭಾಸ್ಕರ್ ನಾಯಕ್, ಮೋಹಿನಿ ತಮ್ಮಣೇಗೌಡ, ಜಯಮ್ಮ, ಕುಶಾಲನಗರ ಪಟ್ಟಣ ಪಂಚಾಯತತ ಅಧ್ಯಕ್ಷ ಜರ್ಯವರ್ಧನ್ (ಕೇಶವ) ಕೂಡ ಅಧ್ಯಕ್ಷ ಚರಣ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಕೆ.ಆರ್. ಮಂಜಳಾ, ಕುಶಾಲನಗರ ನಗರ ಬಿಜೆಪಿ ಅಧ್ಯಕ್ಷರಾದ ಉಮಾ ಶಂಕರ್, ಕುಶಾಲನಗರ ಪಟ್ಟಣ ಪಂಚಾಯತ್ ಸದಸ್ಯರಾದ ಅಮೃತ್ ರಾಜ್, ಪ್ರಮೀಣ್, ವೈಶಾಕ್ ಪುಡರೀಕಾಕ್ಷ, ಕೆ ವರದ, ಕೆ ಕೆ ಭೋಗಪ್ಪ, ವಾಂಚಿರ ಮನು ನಂಜುಂಡ, ಪ್ರಭಾಕರ, ಕೂಡಿಗೆ ಕೂಡುಮಂಗಳೂರು ಮುಳ್ಳುಸೋಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಬಿ ಜೆ ಪಿ ಶಕ್ತಿ ಕೇಂದ್ರ ಅಧ್ಯಕ್ಷರುಗಳು, ಉಪಾಧ್ಯಕ್ಷರು ಸೇರಿದಂತೆ ವಿವಿಧ ಬಿ ಜೆ ಪಿ ಘಟಕ ಪದಾಧಿಕಾರಿಗಳು ಹಾಗೂ ಅಯಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾರ್ಯಕರ್ತರು ಮತ್ತು ಗ್ರಾಮ ಪಂಚಾಯತಿ ಸದಸ್ಯರಗಳು ಹಾಜರಿದ್ದರು.