ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್‌ನಲ್ಲಿ ಟನಲ್ ಯೋಜನೆಗೆ 40 ಸಾವಿರ ಕೋಟಿ ರೂ. ಘೋಷಣೆ ಮಾಡಲಾಗಿದೆ.
ಕೈಗಾರಿಕಾ ಮತ್ತು ಉತ್ಪಾದನಾ ವಲಯದ ಅಭಿವೃದ್ಧಿಗೆ ಬದ್ಧವಾಗಿದ್ದು, 2030ರ ವೇಳೆಗೆ 20 ಲಕ್ಷ ಉದ್ಯೋಗ ಸೃಜಿಸುವ ಗುರಿ ಹೊಂದಿದೆ. ಸರ್ಕಾರದ ವಿವಿಧ ಫಲಾನುಭವಿಗಳಿಗೆ ಮಧ್ಯವರ್ತಿಗಳಿಲ್ಲದೆ 1 ಲಕ್ಷ ಕೋಟಿ ರೂ.ಹಣವನ್ನು ವರ್ಗಾಯಿಸಲಾಗಿದೆ. ಕಲ್ಯಾಣ ಇಲಾಖೆಗಳ ಮೂಲಕ ಅಸಾಹಯಕರನ್ನು ಬಲಗೊಳಿಸಲು ಈ ಆಯವ್ಯಯವೂ ನೆರವಾಗಲಿದೆ.