ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು 5 ರೂಪಾಯಿ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಒಕ್ಕೂಟ ಮನವಿ ಮಾಡಿದ್ದೂ, ಮನವಿ ಈ ಮೂಲಕ ರೈತರಿಗೆ ನೀಡಲಾಗುವ ಪ್ರೋತ್ಸಾಹಧನವನ್ನು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ನೂತನ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದರು.
ಈ ಕುರಿತು ಮಾತನಾಡಿದ ಅವರು, ಕೆಎಂಎಫ್ ಅಧ್ಯಕ್ಷರಾಗಿಅವಿರೋಧವಾಗಿ ಆಯ್ಕೆ ಮಾಡಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಹಿರಿಯರ ಶ್ರಮದಿಂದ ಈ ಮಟ್ಟಕ್ಕೆ ಬಂದು ನಿಂತಿದೆ. ಸರ್ಕಾರದ ಮಾರ್ಗದರ್ಶನದ ಜತೆಗೆ ರೈತರು, ಗ್ರಾಹಕರ ಸಹಕಾರ ಕೋರುತ್ತೇನೆ. ನಂದಿನಿ ಹಾಲು ರಾಷ್ಟ್ರಮಟ್ಟದ ಬ್ರಾಂಡ್ ಆಗಿದೆ. ಖಾಸಗಿಯವರಿಗೆ ಸ್ಪರ್ಧೆ ನೀಡುವ ಕೆಲಸವನ್ನ ಕೆಎಂಎಫ್ ಮಾಡಲಿದೆ. ಚರ್ಮಗಂಟು ರೋಗದಿಂದ ಹಾಲು ಕಡಿಮೆಯಾಗಿತ್ತು. ಹೀಗಾಗಿ ತುಪ್ಪದ ಕೊರತೆ ಉಂಟಾಗಿತ್ತು ಎಂದು ಮಾಹಿತಿ ನೀಡಿದರು.
ಹಾಲಿನ ದರ ಹೆಚ್ಚಳ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ಈಗಾಗಲೇ ಕರ್ನಾಟಕ ಹಾಲು ಒಕ್ಕೂಟದಿಂದ ಬೆಲೆ ಏರಿಕೆ ಮಾಡುವಂತೆ ಮನವಿ ಬಂದಿದೆ. ರೈತರಿಗೆ 5 ರೂ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರೋತ್ಸಾಹಧನ ಮೊತ್ತವನ್ನು ಇನ್ನೂ 2 ರೂ. ಹೆಚ್ಚಳ ಮಾಡುವ ಬಗ್ಗೆ ತೀರ್ಮಾನ ಇದೆ. ಆದ್ದರಿಂದ ಗ್ರಾಹಕರಿಕೆ ಮಾರಾಟ ಮಾಡುವ ನಂದಿನಿ ಹಾಲಿನ ಪ್ರತಿ ಲೀಟರ್ ಗೆ 5 ರೂ ಹೆಚ್ಚಳ ಮಾಡುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.