September 30, 2026
Wednesday, September 30, 2026
spot_img

ದೀರ್ಘಕಾಲದಿಂದ ನನೆಗುದಿಗೆ ಬಿದ್ದಿದ್ದ ಬೆಂಗಳೂರು ಉಪನಗರ ರೈಲು ಯೋಜನೆಗೆ 500 ಕೋಟಿ ರೂ. ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2026-27ರ ಕೇಂದ್ರ ಬಜೆಟ್‌ನಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಬೆಂಗಳೂರು ಉಪನಗರ ರೈಲು ಯೋಜನೆಗೆ 500 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ.

ಕೇಂದ್ರ ಸರ್ಕಾರದ ಬಜೆಟ್ 2026ರಲ್ಲಿ ಬೆಂಗಳೂರು ಭಾಗದ ರೈಲು ಅಭಿವೃದ್ಧಿ ಯೋಜನೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅನುದಾನ ಘೋಷಿಸಿದ್ದಾರೆ. ಈ ಹಂಚಿಕೆ ಕಳೆದ ಸಾಲಿಗಿಂತ ಕೊಂಚ ಹೆಚ್ಚು ಎನ್ನಬಹುದು. ಆದರೆ ನಿರೀಕ್ಷೆಯಷ್ಟು ಅಲ್ಲ ಎನ್ನಲಾಗಿದೆ. ಬೆಂಗಳೂರು ಉಪನಗರ ರೈಲು ಸಾರಿಗೆ ಯೋಜನೆಗೆ ಬಜೆಟ್‌ನಲ್ಲಿ 500 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ.

ಬೆಂಗಳೂರು ಉಪನಗರ ರೈಲು ಯೋಜನೆಗೆ ಕೇಂದ್ರ ಬಜೆಟ್ 500 ಕೋಟಿ ರೂ.ಗಳನ್ನು ನಿಗದಿಪಡಿಸಿದೆ. ಕಳೆದ ವರ್ಷ 2025-26ರಲ್ಲಿ 350 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ. ಅದಕ್ಕೆ ಹೋಲಿಕೆ ಮಾಡಿದರೆ ಈ ಬಾರಿ 150 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ಘೋಷಿಸಲಾಗಿದೆ. ಈ ಬೆಂಗಳೂರು ಉಪನಗರ ರೈಲು ಯೋಜನೆಯು 2020 ರಲ್ಲಿ ಅನುಮೋದನೆ ನೀಡಲಾಯಿತು.ಅಲ್ಲಿಂದ ಈವರೆಗೆ ನಿಧಾನಗತಿಯಲ್ಲಿ ಕಾಮಗಾರಿ ಸಾಗಿದ್ದು, 2027ರಲ್ಲಿ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

Must Read