ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಮಹಾತ್ಮಾ ಗಾಂಧಿ ನಗರ ವಿಕಾಸ್ 2.0 ಯೋಜನೆಗೆ 2,000 ಕೋಟಿ ರೂ. ಅನುದಾನ ಘೋಷಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಯುಐಡಿಎಫ್ ಅಡಿಯಲ್ಲಿ 600 ಕೋಟಿ ರೂ. ಅನುದಾನ ಒದಗಿಸಲಾಗಿದೆ.
ನಗರೋತ್ಥಾನ 4ನೇ ಹಂತದ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು 2024-26ನೇ ಸಾಲಿಗೆ 500 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಬಜೆಟ್ನಲ್ಲಿ ತಿಳಿಸಲಾಗಿದೆ.
ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳು, ಜಿಲ್ಲಾ ನಗರಾಭಿವೃದ್ಧಿ ಕೋಶಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಸೆಂಟರ್ ಫಾರ್ ಇ-ಗವರ್ನೆನ್ಸ್ ಇಲಾಖೆಯ ಸಹಯೋಗದೊಂದಿಗೆ ಕಚೇರಿಯ ಸುಗಮ ಆಡಳಿತಕ್ಕೆ ಇ-ಆಫೀಸ್ ವ್ಯವಸ್ಥೆ ಕಡ್ಡಾಯಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.