500 ಕೋಟಿ ರೂ.ವಂಚನೆ ಪ್ರಕರಣ: ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ ಮುಖ್ಯಸ್ಥನ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

500 ಕೋಟಿ ರೂ.ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ಅವರನ್ನು ಗುರುವಾರ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಓಜಾ ಅವರನ್ನು ಬೆಂಗಳೂರಿನ ವಿಶೇಷ ಪಿಎಂಎಲ್ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 10 ದಿನಗಳ ಇಡಿ ಕಸ್ಟಡಿಗೆ ನೀಡಲಾಗಿದೆ.

ರಯಲ್ ಎಸ್ಟೇಟ್ ಯೋಜನೆಗಳಲ್ಲಿ ಹೂಡಿಕೆಯ ಹೆಸರಿನಲ್ಲಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಓಜಾ ವಿರುದ್ಧ ಕರ್ನಾಟಕ ಪೊಲೀಸರು ಹಲವು ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ ಎಂದು ಇಡಿ ತಿಳಿಸಿದೆ.

ವಿವಿಧ ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ದೂರುದಾರರು ಒಟ್ಟು 526 ಕೋಟಿ ರೂಪಾಯಿ ಹೂಡಿಕೆ ಮಾಡಿರುವುದು ನಮ್ಮ ತನಿಖೆಯಿಂದ ತಿಳಿದುಬಂದಿದೆ ಎಂದು ಇಡಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!