Tuesday, August 9, 2022

Latest Posts

ಬಟ್ಟೆ ಬ್ಯಾಗ್ ಖರೀದಿಯಲ್ಲಿ 6.18 ಕೋಟಿ ರೂ ಅಕ್ರಮ: ರೋಹಿಣಿ ಸಿಂಧೂರಿ ವಿರುದ್ಧ ಸಾ.ರಾ.ಮಹೇಶ್ ಆರೋಪ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ ಮೈಸೂರು:

ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಆರೋಪ
ಮೈಸೂರು: ಅರಮನೆ ನಗರಿ ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಇದೀಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ 6.18 ಕೋಟಿ ರೂ ಅಕ್ರಮ ನಡೆಸಿದ ಆರೋಪವನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರ ಕ್ಷೇತ್ರದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಮಾಡಿದ್ದಾರೆ.
ಶುಕ್ರವಾರ ಮೈಸೂರಿನಲ್ಲಿರುವ ತಮ್ಮ ಕಚೇರಿಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು, ಬಟ್ಟೆ ಬ್ಯಾಗ್ ಖರೀದಿಯಲ್ಲಿ 6.18 ಕೋಟಿ ರೂ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ, ಅದಕ್ಕೆ ಸಂಬAಧಿಸಿದ ದಾಖಲೆ ಹಾಗೂ ಬಟ್ಟೆ ಬ್ಯಾಗ್‌ನ್ನು ಬಿಡುಗಡೆ ಮಾಡಿ ಪ್ರದರ್ಶಿಸಿದರು. ಕೇವಲ 8 ರೂ. ಬೆಲೆ ಬಾಳುವ ಬಟ್ಟೆ ಬ್ಯಾಗ್‌ಗೆ 52 ರೂಪಾಯಿ ಕೊಟ್ಟು ಖರೀದಿಸಿದ್ದಾರೆ. ಬ್ಯಾಗ್ ಮೇಲೆ ಪ್ರಿಂಟ್ ಹಾಕಲು 42 ರೂ ಬೇಕಾದ ಎಂದು ಪ್ರಶ್ನಿಸಿದರಲ್ಲದೆ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ಭಾರೀ ಅಕ್ರಮ ಎಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಮೈಸೂರಿನಲ್ಲಿ ಪ್ಲಾಸ್ಟಿಕ್‌ನ್ನು ನಿಷೇಧಿಸಿದ ಬಳಿಕ ಜನರಿಗೆ ಉಚಿತವಾಗಿ ಜಿಲ್ಲಾಡಳಿತದಿಂದ ಬಟ್ಟೆ ಬ್ಯಾಗ್‌ನ್ನು ನೀಡಲು ತೀರ್ಮಾನಿಸಿದ್ದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಒಟ್ಟು 14,71,458 ಬಟ್ಟೆ ಬ್ಯಾಗ್ ಖರೀದಿ ಮಾಡಿಸಿದ್ದಾರೆ. . ಈ ಬ್ಯಾಗ್ ಖರೀದಿಯಲ್ಲಿ 6.18 ಕೋಟಿ ರೂ. ಅಕ್ರಮ ನಡೆದಿದೆ. ವಾಸ್ತವವಾಗಿ ಖರೀದಿಗೆ 1.47 ಕೋಟಿ ರೂ. ಆಗುತ್ತಿತ್ತು ಎಂದು ಅಂಕಿ ಅಂಶಗಳನ್ನು ಮುಂದಿಟ್ಟು ರೋಹಿಣಿ ಸಿಂಧೂರಿ ವಿರುದ್ಧ ಆರೋಪಿಸಿದರು. ನಗರಸಭೆ, ಪುರಸಭೆಗೆಲ್ಲಾ ಇವರೇ ಬ್ಯಾಗ್ ಸರಬರಾಜು ಟೆಂಡರ್‌ಗೆ ಅನುಮೋದನೆ ನೀಡಿದ್ದರು. ಯಾಕೆ ನಗರಸಭೆ, ಪುರಸಭೆ ಮೇಲೆ ಇವರಿಗೆ ಅಷ್ಟೊಂದು ಇಂಟರೆಸ್ಟ್ ಇತ್ತು ಎಂದು ಪ್ರಶ್ನಿಸಿದರು.
ದಾಖಲೆಗಳ ಸಮೇತ ಆರೋಪ ಮಾಡುತ್ತಿದ್ದೇನೆ. ಈ ಹಣವನ್ನು ಅವರಿಂದಲೇ ವಸೂಲಿ ಮಾಡಬೇಕು. ಕ್ರಮ ಆಗಲಿಲ್ಲ ಅಂದರೆ ಮುಖ್ಯ ಕಾರ್ಯದರ್ಶಿಗಳ ಮುಂದೆ ಧರಣಿ ಮಾಡುತ್ತೇವೆ.
ಯಾವುದೇ ಸಂದರ್ಭದಲ್ಲಿ, ಯಾವುದೇ ಅಧಿಕಾರಿಗಳ ಬಗ್ಗೆ ರಾಜಕಾರಣಿಗಳು ಮಾತನಾಡುವಾಗ ಸಾರ್ವಜನಿಕವಾಗಿ ಬೇರೆ ರೀತಿ ಮಾತನಾಡುತ್ತಾರೆ. ಇನ್ನೂ ಮಹಿಳಾ ಅಧಿಕಾರಿ ಆದರೆ ದೇವರೇ ಗತಿ. ಆ ಅಧಿಕಾರಿಯ ಹನ್ನೆರಡು ವರ್ಷಗಳ ಸೇವೆಯನ್ನು ನೋಡಿದ್ದೇನೆ. ಸರ್ಕಾರಿ ಕೆಲಸ ಮಾಡುವಲ್ಲಿ ದಕ್ಷತೆ ಇಲ್ಲ. ಅಪ್ರಮಾಣಿಕ ಅಧಿಕಾರಿ ನೇಮಕಕ್ಕೆ ವಿರೋಧ ಮಾಡಿದ್ದೆ. ನಾನು ಎಂಟು ಆರೋಪ ಮಾಡಿದ್ದೆ. ಅದರಲ್ಲಿ ಅವರ ಅಧಿಕಾರಿಗಳೇ ವರದಿ ಕೊಟ್ಟಿದ್ದಾರೆ. ಅವರನ್ನು ಅಮಾನತು ಮಾಡಿ, ಲೋಪ ಆಗಿರುವ ಹಣವನ್ನು ಅವರಿಂದಲೇ ವಸೂಲಿ ಆಗಬೇಕು ಎಂದು ಮುಖ್ಯಮಂತ್ರಿ ಹಾಗೂ ಸರ್ಕಾರದ ಕಾರ್ಯದರ್ಶಿಗಳಿಗೆ ಮನವಿ ಮಾಡಿದ್ದೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss