ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಸರಗೋಡು ಜಿಲ್ಲೆಯ ಅಂಬಲತ್ತರ ಗುರುಪುರಮ್ ಎಂಬಲ್ಲಿನ ಮನೆಯೊಂದರಲ್ಲಿ ಎರಡು ಸಾವಿರ ರೂ. ಮುಖಬೆಲೆಯ ಏಳು ಕೋಟಿ ರೂ. ನೋಟುಗಳು ಪತ್ತೆಯಾಗಿದ್ದು, ಪೊಲೀಸರು ಇದನ್ನು ವಶಕ್ಕೆ ಪಡೆದಿದ್ದಾರೆ.
ಇಲ್ಲಿನ ಮನೆಯೊಂದರಲ್ಲಿ ಹಣದ ದಾಸ್ತಾನು ಇದೆ ಎಂಬ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು ಈ ವೇಳೆ ಈಗಾಗಲೇ ರದ್ದುಗೊಂಡಿರುವ ಈ ನೋಟುಗಳು ಸಿಕ್ಕಿವೆ. ಈ ಬಗ್ಗೆ ತನಿಖೆ ಆರಂಭವಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.