ಸರ್ಕಾರಿ ಉದ್ಯೋಗಿಗಳಿಗೆ ಆರ್​ಎಸ್​ಎಸ್​ ನಿಷೇಧ ತೆರವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಭಾಗವಹಿಸುವುದಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಪ್ರಧಾನಿ ನರೇಂದ್ರಮೋದಿ ಸರ್ಕಾರ ತೆಗೆದುಹಾಕಿದೆ.

ಈ ಕುರಿತು ಕಳೆದ ವಾರವೇ ಆದೇಶ ಹೊರಡಿಸಿದ್ದು, ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ಬಿಜೆಪಿಯ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಆದೇಶದ ಸ್ಕ್ರೀನಶಾಟ್ ಅನ್ನು ಹಂಚಿಕೊಂಡಿದ್ದು, 58 ವರ್ಷಗಳ ಹಿಂದೆ ನೀಡಲಾದ ಸಂವಿಧಾನಿಕ ನಿರ್ದೇಶನವನ್ನು ಮೋದಿ ಸರ್ಕಾರವು ಹಿಂಪಡೆದಿದೆ ಎಂದು ಹೇಳಿಕೊಂಡಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗಿದರೆ, ಶಿಸ್ತು ಕ್ರಮ ಜರಗಿಸುವ ಕಾನೂನನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ. ಸರ್ದಾರ್ ಪಟೇಲ್ ಅವರು ಫೆಬ್ರವರಿ 1948 ರಲ್ಲಿ ಗಾಂಧೀಜಿಯವರ ಹತ್ಯೆಯ ನಂತರ ಆರ್‌ಎಸ್‌ಎಸ್‌ನ್ನು ನಿಷೇಧಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!