ಹೊಸ ದಿಗಂತ ವರದಿ, ಬೆಂಗಳೂರು:
ನಟ, ನಿರ್ಮಾಪಕ, ನಿರೂಪಕ, ಹಾಡುಗಾರ, ನೃತ್ಯಗಾರ, ಕನ್ನಡ ಕಲಾಕ್ಷೇತ್ರದ ಅನರ್ಘ್ಯ ರತ್ನ ಪುನೀತ್ ರಾಜ್ಕುಮಾರ್ ಅವರ ನಿಧನಕ್ಕೆ ಧಾರವಾಡದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿಯು ತೀಪ್ರ ಸಂತಾಪ ವ್ಯಕ್ತಪಡಿಸಿದೆ.
ಕನ್ನಡ ಚಿತ್ರರಂಗದ ಪ್ರಸಿದ್ಧ ನಟ ಪುನೀತ್ ರಾಜಕುಮಾರ್ ಅವರ ನಿಧನಕ್ಕೆ ಆರೆಸ್ಸೆಸ್ನ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿಯು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಪುನೀತ್ ರಾಜ್ಕುಮಾರ್ ಅವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳಿಗೆ ಭಗವಂತನು ನೀಡಲೆಂದು ಆರೆಸ್ಸೆಸ್ ಪ್ರಾರ್ಥಿಸುತ್ತದೆ ಎಂದು ಆರೆಸ್ಸೆಸ್ ಕ್ಷೇತ್ರೀಯ ಸಂಘಚಾಲಕ ವಿ. ನಾಗರಾಜ್ ತಿಳಿಸಿದ್ದಾರೆ.