spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜನರಲ್ ರಾವತ್ ದುರ್ಮರಣ- ಆರೆಸ್ಸೆಸ್ ಸಂತಾಪ

- Advertisement -Nitte

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಹೆಲಿಕಾಪ್ಟರ್ ಅವಘಡದಲ್ಲಿ ಜನರಲ್ ಬಿಪಿನ್ ರಾವತ್ ಮರಣಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸಂತಾಪ ವ್ಯಕ್ತಪಡಿಸಿದ್ದಾರೆ.

“ರಕ್ಷಣಾ ವ್ಯವಸ್ಥೆಯ ಪ್ರಮುಖರಾದ ಜನರಲ್ ಬಿಪಿನ್ ರಾವತ್ ಅವರು ದುರ್ಘಟನೆಯಲ್ಲಿ ಮೃತರಾಗಿರುವುದು ಅತ್ಯಂತ ದುಃಖದ ಸಂಗತಿ. ಅವರ ನೇತೃತ್ವದಲ್ಲಿ ಭಾರತೀಯ ಸೇನೆ ಪರಾಕ್ರಮದ ಹೊಸ ರೂಪಗಳನ್ನು ತೋರಿಸಿತ್ತು. ಅವರ ನಿಧನದಿಂದ ದೇಶವು ಒಬ್ಬ ಶ್ರೇಷ್ಠ ರಣನೀತಿ ತಜ್ಞರನ್ನು ಕಳೆದುಕೊಂಡಂತಾಗಿದೆ. ಇಂಥ ದೌರ್ಗಾಭ್ಯದ ಘಟನೆಯ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವು ದಿವಂಗತ ಜನರಲ್ ರಾವತ್, ಅವರ ಪತ್ನಿ ಹಾಗೂ ಉಳಿದ ಸೈನಿಕರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸುತ್ತದೆ.” ಎಂದು ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss