ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹಕಾರ್ಯವಾಹರಾದ ಸಿ. ಆರ್.ಮುಕುಂದ ಮತ್ತು ಅಖಿಲ ಭಾರತೀಯ ಕಾರ್ಯಕಾರಿಣಿ ಮಂಡಲಿಯ ಆಮಂತ್ರಿತ ಸದಸ್ಯರಾದ ಕಜಂಪಾಡಿ ಸುಬ್ರಮಣ್ಯ ಭಟ್ ಇವರು ಇಂದು ಕೇರಳದ ಕಾಸರಗೋಡಿನ ಎಡನೀರು ಮಠದ ಪೂಜ್ಯ ಶ್ರೀ ಸಚ್ಚಿದಾನಂದ ಭಾರತಿ ಮಹಾಸ್ವಾಮಿಗಳನ್ನು ಭೇಟಿ ಮಾಡಿದರು. ಇದು ಸೌಹಾರ್ದದದ ಭೇಟಿಯಾಗಿತ್ತು ಎಂದು ತಿಳಿದುಬಂದಿದೆ.