Wednesday, January 14, 2026
Wednesday, January 14, 2026
spot_img

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ: ಪುಷ್ಪಾರ್ಚನೆ ಮಾಡಿ ಭವ್ಯ ಸ್ವಾಗತ ನೀಡಿದ ಜನತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನ ಇಂದು ಯಶಸ್ವಿಯಾಗಿ ನಡೆದಿದೆ.

ಚಿತ್ತಾಪುರದ ಬಜಾಜ್ ಕಲ್ಯಾಣ ಮಂಟಪದಿಂದ ಆರಂಭವಾಗಿ ಅಂಬೇಡ್ಕರ್ ಸರ್ಕಲ್, ಬಸವ ಆಸ್ಪತ್ರೆ,ಎಚ್‌ಡಿಎಫ್‌ಸಿ ಬ್ಯಾಂಕ್ ರಸ್ತೆ, ಬಸವೇಶ್ವರ ಸರ್ಕಲ್‌ ಮೂಲಕ ಸಾಗಿ ಬಜಾಜ್ ಕಲ್ಯಾಣ ಮಂಟಪದಲ್ಲಿ ಮುಕ್ತಾಯವಾಯಿತು.

ಹೈಕೋರ್ಟ್‌ ಆದೇಶದಂತೆ 300 ಜನ ಗಣವೇಶಧಾರಿಗಳು ಹಾಗೂ 50 ಜನ ಬ್ಯಾಂಡ್ ವಾದಕರಿಗೆ ಮಾತ್ರ ಭಾಗಿಯಾಗಲು ಅವಕಾಶ ನೀಡಲಾಗಿತ್ತು.

ಆರ್‌ಎಸ್‌ಎಸ್‌ 100 ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ನಡೆದ ಪಥಸಂಚಲನದಲ್ಲಿ ಭಾಗಿಯಾದ ಗಣವೇಷಧಾರಿಗಳಿಗೆ ಮಹಿಳೆಯರು, ಮಕ್ಕಳು, ಸಾರ್ವಜನಿಕರು ಪುಷ್ಪಾರ್ಚನೆ ಮಾಡಿ ಭವ್ಯ ಸ್ವಾಗತ ನೀಡಿದರು.ರಸ್ತೆಯ ಎರಡೂ ಬದಿಯಲ್ಲಿ ನಿಂತು ಗಣವೇಷಧಾರಿಗಳ ಮೇಲೆ ಹೂವಿನ ಮಳೆ ಸುರಿಸಿದರು. ಅಚ್ಚುಕಟ್ಟಾಗಿ ನಡೆದ ಪಥಸಂಚಲನ ಕಾರ್ಯಕ್ರಮ ನಾಡಿನ ಮನಸೆಳೆಯಿತು.

ಬಿಗಿ ಭದ್ರತೆ:
ಪಥಸಂಚಲನ ನಡೆಯುವ 1.25 ಕಿ.ಮೀ. ಸಾಗುವ ದಾರಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದರು. ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ನೇತೃತ್ವದಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌, ಕೆಎಸ್‌ಆರ್‌ಪಿ ಡಿಎಆರ್ ತುಕಡಿ ಸೇರಿದಂತೆ 650ಜನ ಪೋಲಿಸರು 250ಜನ ಹೋಮ್ ಗಾರ್ಡ್ ನಿಯೋಜನೆ ಮಾಡಲಾಗಿತ್ತು.

Most Read

error: Content is protected !!