ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡುವುದಕ್ಕೆ ನಿರಾಕರಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘವು ಸ್ವಾಗತಿಸುವುದಾಗಿ ಅಖಿಲ ಭಾರತೀಯ ಪ್ರಚಾರ ಪ್ರಮುಖರಾದ ಸುನಿಲ್ ಅಂಬೇಕರ್ ಹೇಳಿದ್ದಾರೆ.
“ಸಲಿಂಗ ವಿವಾಹದ ಕುರಿತು ಕಾನೂನು ಹೇಗಿರಬೇಕೆಂಬುದರ ನಿರ್ಣಯ ತೆಗೆದುಕೊಳ್ಳುವುದಕ್ಕೆ ನಮ್ಮ ಸಂಸದೀಯ ವ್ಯವಸ್ಥೆ ಸಶಕ್ತವಾಗಿದೆ. ಅದು ಈ ನಿಟ್ಟಿನಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತದೆ” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.