spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೇರಳದಿಂದ ಬರುವವರಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ತಮಿಳುನಾಡು

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇರಳದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಇಲ್ಲಿಂದ ಬರುವವರಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿಯನ್ನು ತಮಿಳುನಾಡು ಸರ್ಕಾರ ಭಾನುವಾರ ಕಡ್ಡಾಯ ಮಾಡಿದೆ. ಅಲ್ಲದೇ, ತಮಿಳುನಾಡಿಗೆ ಬರುವ ಪ್ರಯಾಣಿಕರು ಸಂಪೂರ್ಣ ಲಸಿಕೆ ಪ್ರಮಾಣ ಪತ್ರವನ್ನು ಹಾಜರುಪಡಿಸಬಹುದಾಗಿದೆ.
ಕಳೆದ ಮೂರು ದಿನಗಳಲ್ಲಿ ತಮಿಳುನಾಡಿನಲ್ಲೂ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದನ್ನು ನೋಡಬಹುದಾಗಿದೆ ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಹೇಳಿದರು.
ಆರೋಗ್ಯ ಕಾರ್ಯದರ್ಶಿ ಜೆ ರಾಧಾಕೃಷ್ಣನ್ ಜೊತೆಯಲ್ಲಿ ಭಾನುವಾರ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಬ್ರಮಣಿಯನ್, ಕೇರಳದಿಂದ ರೈಲು, ವಿಮಾನ ಅಥವಾ ರಸ್ತೆ ಮೂಲಕ ಬರುವವರು ಕಡ್ಡಾಯವಾಗಿ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಪಡಿಸಬೇಕು.ಇದು ಆಗಸ್ಟ್ 5 ರಿಂದ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದರು.
ಲಸಿಕೆ ಪ್ರಮಾಣ ಪತ್ರ ಹಾಜರುಪಡಿಸುವವರಿಗೆ ರಾಜ್ಯಕ್ಕೆ ಬರಲು ಅನುಮತಿ ನೀಡಲಾಗಿದೆ. ಆದರೆ, ಎರಡನೇ ಡೋಸ್ ಲಸಿಕೆ ಪಡೆದು 14 ದಿನ ಪೂರ್ಣಗೊಳಿಸಿರಬೇಕು ಅಂತವರಿಗೆ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss