ಚೀನಾ ಸಹಿತ ವಿವಿಧ ದೇಶಗಳಿಂದ ಬರುವ ಪ್ರಯಾಣಿಕರಿಗೆ RT-PCR ಟೆಸ್ಟ್ ಕಡ್ಡಾಯ: ಕೇಂದ್ರ ಸಚಿವ ಡಾ.ಮನ್ಸುಖ್ ಮಾಂಡವಿಯಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಚೀನಾ ಸಹಿತ ನಾನಾ ದೇಶಗಳಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಆರ್ಟಿ-ಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.

ಇದರ ಜೊತೆಗೆ ಆಗಮಿಸುವ ಪ್ರಯಾಣಿಕರಿಗೆ ಪಾಸಿಟಿವ್ ಬಂದರೆ, ಅವರನ್ನು ಕ್ವಾರಂಟೈನ್ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಇದೇ ವೇಳೆ ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್ ಮತ್ತು ಥೈಲ್ಯಾಂಡ್ ಮೊದಲಾದ ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಏರ್ ಸುವಿಧಾ ಪೋರ್ಟಲ್ ಅನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!