Friday, March 24, 2023

Latest Posts

ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದವರಿಗೆ ಅಪಘಾತ: 15ಮಂದಿ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದವರಿಗೆ ಅಪಘಾತ ಸಂಭವಿಸಿ ಆಸ್ಪತ್ರೆ ಪಾಲಾಗಿದ್ದಾರೆ. ವನಪರ್ತಿ ಜಿಲ್ಲೆಯಲ್ಲಿ ರಸ್ತೆ ಅಪಘಾತದಲ್ಲಿ ಸರ್ಕಾರಿ ಸಾರಿಗೆ ಪಲ್ಟಿಯಾಗಿದ್ದು, 15 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೈದರಾಬಾದ್‌ನಿಂದ ತಿರುಪತಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಪೊಲೀಸರ ಪ್ರಕಾರ, ಯಾದಗಿರಿಗುಟ್ಟ ಡಿಪೋಗೆ ಸೇರಿದ ಆರ್‌ಟಿಸಿ ಬಸ್ ವನಪರ್ತಿ ಜಿಲ್ಲೆಯ ಕೊಟ್ಟಕೋಟ ಬಳಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ವನಪರ್ತಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ನರಸಿಂಹ್ಮ, ಶಕೀಲಾ ಮತ್ತು ಶಬ್ಬೀರ್ ಅಹಮದ್ ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತದ ವೇಳೆ ಬಸ್‌ನಲ್ಲಿ 37 ಮಂದಿ ಪ್ರಯಾಣಿಕರಿದ್ದರು. ಮಾಹಿತಿ ಪಡೆದು ಕೊತ್ತಕೋಟ ಎಸ್ಐ ನಾಗಶೇಖರ್ ರೆಡ್ಡಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಗಾಯಾಳುಗಳನ್ನು 108 ವಾಹನದಲ್ಲಿ ವನಪರ್ತಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಉಳಿದ ಪ್ರಯಾಣಿಕರನ್ನು ಬೇರೆ ಬಸ್‌ಗಳಲ್ಲಿ ಕಳುಹಿಸಲಾಯಿತು. ಚಾಲಕನ ಅತಿವೇಗ ಹಾಗೂ ನಿದ್ದೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!