ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಆರ್.ಟಿ.ಐ ಕಾರ್ಯಕರ್ತ ವೆಂಕಟೇಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆ ಮೂವರು ಆರೋಪಿಗಳನ್ನ ಬಂಧಿಸುವಲ್ಲಿ ತಾವರೆಕೆರೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರದೀಪ್ ಕುಮಾರ್ (33) ಸತೀಶ್ (20) ತೇಜಸ್ (22) ಬಂಧಿತ ಆರೋಪಿಗಳು. ಜುಲೈ 15 ರಂದು ಮಾರಕಾಸ್ತ್ರಗಳಿಂದ ವೆಂಕಟೇಶ್ ಮೇಲೆ ಆರೋಪಿಗಳು ದಾಳಿ ಮಾಡಿದ್ದರು. ದಾಳಿಯಲ್ಲಿ ವೆಂಕಟೇಶ್ ಕೈ ಮತ್ತು ಕಾಲು ಕಟ್ ಆಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಜುಲೈ 17 ರಂದು ಆಸ್ಪತ್ರೆಯಲ್ಲಿ ವೆಂಕಟೇಶ್ ಮೃತಪಟ್ಟಿದ್ದಾರೆ.