ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮಾದಪಟ್ಟಣದಲ್ಲಿ ಆರ್ ಟಿಐ ಕಾರ್ಯಕರ್ತನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಪ್ರದೀಪ್ (38) ಮೃತ ದುರ್ದೈವಿ. ಕಾರ್ ಶೆಡ್ ನಲ್ಲಿ ಅರೆನಗ್ನವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪ್ರದೀಪ್ ಶವ ಪತ್ತೆಯಾಗಿದೆ.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.