ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ಅಂತಾರಾಜ್ಯ ದೇಶೀಯ ಪ್ರಯಾಣವನ್ನು ಕೈಗೊಳ್ಳುವ ಆರೋಗ್ಯವಂತ ವ್ಯಕ್ತಿಗಳಲ್ಲಿ ಯಾವುದೇ ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯವಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐ.ಸಿ.ಎಂ.ಆರ್) ಹೇಳಿದೆ.
ಪ್ರಯೋಗಾಲಯಗಳ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಅಂತಾರಾಜ್ಯ ದೇಶೀಯ ಪ್ರಯಾಣವನ್ನು ಕೈಗೊಳ್ಳುವ ಆರೋಗ್ಯವಂತ ವ್ಯಕ್ತಿಗಳಲ್ಲಿ ಆರ್ ಟಿಪಿಸಿಆರ್ ಪರೀಕ್ಷೆಯ ಅಗತ್ಯವನ್ನು ಸಂಪೂರ್ಣವಾಗಿ ತೆಗೆದುಹಾಕಬಹುದು. ಅಗತ್ಯ ಪ್ರಯಾಣವನ್ನು ಅರ್ಥಮಾಡಿಕೊಳ್ಳುವ ಎಲ್ಲಾ ರೋಗಲಕ್ಷಣವಿಲ್ಲದ ವ್ಯಕ್ತಿಗಳು ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸಬೇಕು ಎಂದು ಐ.ಸಿ.ಎಂ.ಆರ್ ಸ್ಪಷ್ಟ ಪಡಿಸಿದೆ.
ಕೊರೋನಾ ಎರಡನೇ ಅಲೆಯ ಸಮಯದಲ್ಲಿ ಐಸಿಎಂಆರ್ ಕೋವಿಡ್19 ಪರೀಕ್ಷೆಗೆ ಸಲಹೆ ನೀಡಿದ್ದು, ಆರ್ ಟಿಪಿಸಿಆರ್ ಪರೀಕ್ಷೆಯನ್ನು ಆರ್ ಟಿ ಅಥವಾ ಆರ್ ಟಿಪಿಸಿಆರ್ ನಿಂದ ಒಮ್ಮೆ ಪಾಸಿಟಿವ್ ಪರೀಕ್ಷಿಸಿದ ಯಾವುದೇ ವ್ಯಕ್ತಿಯಲ್ಲಿ ಪುನರಾವರ್ತಿಸಬಾರದು ಎಂದು ತಿಳಿಸಿದೆ.
Indian Council of Medical Research (ICMR) issues advisory for COVID19 testing during the second wave of the pandemic; RTPCR test must not be repeated in any individual who has tested positive once either by RAT or RTPCR. pic.twitter.com/Tjkez7lmaL
— ANI (@ANI) May 4, 2021