VIDEO | ಮಹಿಳೆ ಮುಂದೆ ಮೆಟ್ರೋ ಸಿಬ್ಬಂದಿಯಿಂದಲೇ ಅಸಭ್ಯ ವರ್ತನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚೆಗಷ್ಟೇ ಮೆಟ್ರೋದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮುಂದೆ ಅಸಭ್ಯ ವರ್ತನೆ ತೋರಿದ್ದ ಪ್ರಕರಣ ಎಲ್ಲೆಡೆ ಆತಂಕ ಸೃಷ್ಟಿಮಾಡಿತ್ತು. ಇದೀಗ ಮೆಟ್ರೋ ಸಿಬ್ಬಂದಿಯೇ ಅಸಭ್ಯ ವರ್ತನೆ ತೋರಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಜಾಲಹಳ್ಳಿ ಮೆಟ್ರೋ ಸ್ಟೇಷನ್‌ನಲ್ಲಿ ಮಹಿಳೆ ಮುಂದೆ ಖಾಸಗಿ ಅಂಗ ಮುಟ್ಟಿಕೊಂಡು ಅಸಹ್ಯ ಬರುವಂಥ ವರ್ತನೆ ತೋರಿದ್ದು, ಈ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ. ಮಹಿಳೆ ಮೆಟ್ರೋ ಮೇಲಧಿಕಾರಿಗಳಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಯಾರೂ ಕ್ರಮ ಕೈಗೊಳ್ಳದೆ ಇದ್ದ ಕಾರಣ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್‌ಲೋಡ್ ಮಾಡಿ ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!