ಮೆಟ್ರೋ ರೈಲಿನಲ್ಲಿ ಅಸಭ್ಯ ವರ್ತನೆ: ಯುವಕನ ವಿರುದ್ಧ ಕ್ರಮಕ್ಕೆ ಸ್ವಾತಿ ಮಲಿವಾಲ್ ಆಗ್ರಹ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊ ವಿರುದ್ಧ ದೆಹಲಿಯ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಅಸಮಾಧಾನ ಹೊರಹಾಕಿದ್ದಾರೆ.

ದೆಹಲಿ ಮೆಟ್ರೊ ರೈಲಿನಲ್ಲಿ ಯುವಕನೊಬ್ಬ ಪ್ರಯಾಣಿಕರ ನಡುವೆಯೇ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಈ ವೇಳೆ ಸಾಕಷ್ಟು ಮಹಿಳಾ ಪ್ರಯಾಣಿಕರು ಇದ್ದರು . ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಸಂಬಂಧ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯೆ ನೀಡಿರುವ ಸ್ವಾತಿ ಮಲಿವಾಲ್ ಈ ನಾಚಿಕೆಗೇಡಿನ ಕೃತ್ಯಕ್ಕಾಗಿ ಪೊಲೀಸರು ಯುವಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ದೆಹಲಿ ಮೆಟ್ರೊದಲ್ಲಿ ಯುವಕನೊಬ್ಬ ನಾಚಿಕೆಯಿಲ್ಲದೆ ಈ ರೀತಿ ಮಾಡಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ತುಂಬಾ ಅಸಹ್ಯಕರ, ನೋವಿನ ಸಂಗತಿ. ಆ ಯುವಕನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ದೆಹಲಿ ಪೊಲೀಸರು ಮತ್ತು ದೆಹಲಿ ಮೆಟ್ರೊಗೆ ಸೂಚನೆ ನೀಡಿದ್ದೇನೆ ಎಂದು ಟ್ವಿಟರ್​​ನಲ್ಲಿ ಸ್ವಾತಿ ಮಲಿವಾಲ್ ತಿಳಿಸಿದ್ದಾರೆ.

ಪ್ರಯಾಣಿಕರು ಕೂಡ ಅಸಮಾಧಾನ ಹೊರಹಾಕಿದ್ದು, ಮೆಟ್ರೊದಲ್ಲೂ ಪೊಲೀಸರೊಬ್ಬರು ಬೇಕು ಎಂದು ಹಲವಾರು ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!