ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋದಲ್ಲಿ ಯುವಕ-ಯುವತಿ ಅಸಭ್ಯ ವರ್ತನೆ ತೋರಿದ್ದು, ಪ್ರಯಾಣಿಕರಿಗೆ ಕಿರಿಕಿರಿಯಾಗಿದೆ.
ಚಲಿಸುತ್ತಿದ್ದ ಮೆಟ್ರೋ ರೈಲಿನಲ್ಲಿ ಯುವಕ- ಯುವತಿ ಪರಸ್ಪರ ಬಿಗಿದಪ್ಪಿ, ಮುತ್ತಿಕ್ಕಿದ್ದಾರೆ, ಪ್ರಯಾಣಿಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಶೇರ್ ಮಾಡಿದ್ದಾರೆ. ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ರೀ ಟ್ವೀಟ್ ಮಾಡಿದ್ದಾರೆ.
Hey @OfficialBMRCL @NammaMetro_ @BlrCityPolice
what happening in Namma metro
slowly Bangalore metro are turning into Delhi metro
Take some action on them
The girl was literally kissing the boy pic.twitter.com/p3pdi2vM7I— KPSB 52 (@Sam459om) May 5, 2024