Sunday, December 10, 2023

Latest Posts

ಮಹಿಳೆಯರ ಬಗ್ಗೆ ಅಸಭ್ಯ ಮಾತು: ಸಂಗಾತಿಯಿಂದ ದೂರವಾದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ತಮ್ಮ ಪತಿ ಆಂಡ್ರಿಯಾ ಗಿಯಾಂಬ್ರುನೊ ಅವರಿಂದ ಬೇರೆಯಾಗುತ್ತಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಸ್ವತಃ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ವಿಚಾರ ಬಹಿರಂಗಪಡಿಸಿದ್ದಾರೆ.

ಜಾರ್ಜಿಯಾ ಮೆಲೋನಿ ಪತಿ ಆಂಡ್ರಿಯಾ ಗಿಂಬ್ರೂನೊ ಟಿವಿ ಪತ್ರಕರ್ತನಾಗಿದ್ದು, ಇತ್ತೀಚೆಗೆ ಟಿವಿ ಲೈವ್‌ನಲ್ಲೇ ಸೆಕ್ಸಿಯೆಷ್ಟ್ ಕಾಮೆಂಟ್ ಮಾಡಿ ವ್ಯಾಪಕ ಟೀಕೆಗೆ ಒಳಗಾಗಿದ್ದರು.

ಇದರಿಂದ ಕೆಲ ಸಮಯದಿಂದ ನಮ್ಮಿಬ್ಬರ ಹಾದಿ ಭಿನ್ನವಾಗಿವೆ, ಈಗ ಅದನ್ನು ಒಪ್ಪಿಕೊಳ್ಳುವ ಸಮಯ ಬಂದಿದೆ ಎಂದು ತಿಳಿಸಿದ್ದಾರೆ. ಸುಮಾರು 10 ವರ್ಷಗಳ ಕಾಲ ಆಂಡ್ರಿಯಾ ಗಿಯಾಂಬ್ರುನೊ ಅವರೊಂದಿಗಿನ ನನ್ನ ಸಂಬಂಧವು ಇಲ್ಲಿಗೆ ಕೊನೆಗೊಳ್ಳುತ್ತದೆ ಎಂದು ಅವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ. ದಂಪತಿಗೆ ಒಂದು ಹೆಣ್ಣು ಮಗುವಿದೆ.

ಮೀಡಿಯಾ ಸೆಟ್‌ನಲ್ಲಿ ಸುದ್ದಿ ನಿರೂಪಕನಾಗಿ ಜಿಯಾಂಬ್ರುನೋ ಕೆಲಸ ಮಾಡುತ್ತಿದ್ದರು. ಇದು ಇಟಲಿ ಮಾಜಿ ಪ್ರಧಾನ ಮಂತ್ರಿ ಮತ್ತು ಜಾರ್ಜಿಯಾ ಮೆಲೋನಿ ಮಿತ್ರ ದಿವಂಗತ ಸಿಲ್ವಿಯೊ ಬೆರ್ಲುಸ್ಕೋನಿಯ ಉತ್ತರಾಧಿಕಾರಿಯ ಮಾಲೀಕತ್ವದ ಮಾಧ್ಯಮ ಸಂಸ್ಥೆಯಾಗಿದೆ. ಇದೇ ವಾರದ ಆರಂಭದಲ್ಲಿ ಮೀಡಿಯಾಸೆಟ್‌, ಮೆಲೋನಿ ಪತಿ ಜಿಯಾಂಬ್ರುನೋ ಸುದ್ದಿ ಪ್ರಸಾರದ ವೇಳೆ ಅಸಭ್ಯ ಭಾಷೆ ಬಳಸುತ್ತಿರುವ ವೀಡಿಯೋ ಪ್ರಸಾರ ಮಾಡಲಾಗಿತ್ತು. ಪ್ರಸಾರದ ವೇಳೆ ಅವರು ಮಹಿಳಾ ಸಹೋದ್ಯೋಗಿಯ ಜೊತೆ ಫ್ಲರ್ಟ್‌ ಕೂಡ ಮಾಡುತ್ತಿದ್ದರು. ಆಗ ಮಹಿಳಾ ಸಹೋದ್ಯೋಗಿ ನಾನೇಕೆ ನಿನ್ನ ಈ ಮೊದಲೇ ಭೇಟಿ ಮಾಡಲಿಲ್ಲ? ಎಂದು ಕೇಳಿದ್ದಳು.

ಮತ್ತೊಂದು ರೆಕಾರ್ಡಿಂಗ್‌ನಲ್ಲಿ, ಜಿಯಾಂಬ್ರುನೋ ಅವರು ತಾನು ಹೊಂದಿರುವ ಅಫೇರ್‌ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡಿದ್ದರು. ಮಹಿಳಾ ಸಹೋದ್ಯೋಗಿಗಳು ಗುಂಪು ಲೈಂಗಿಕತೆಯಲ್ಲಿ ಭಾಗವಹಿಸಿದರೆ ಅವರು ತನಗಾಗಿ ಕೆಲಸ ಮಾಡಬಹುದು ಎಂದು ಹೇಳಿದ್ದರು. ಇದಕ್ಕೂ ಮೊದಲು ಆಗಸ್ಟ್‌ನಲ್ಲಿ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯನ್ನು ನಿಂದಿಸುತ್ತಿರುವ ಕಾಮೆಂಟ್‌ಗಳ ಕಾರಣಕ್ಕೂ ಈ ಪತ್ರಕರ್ತ ವ್ಯಾಪಕ ಟೀಕೆಗೆ ಒಳಗಾಗಿದ್ದರು.

ಇದೀಗ ನನ್ನ ಪತಿ ಮಾಡಿದ ಕಾಮೆಂಟ್‌ಗೆ ಜನ ನನ್ನನ್ನು ಪ್ರಶ್ನೆ ಮಾಡಬಾರದು, ಮುಂದಿನ ದಿನಗಳಲ್ಲಿ ಆತನ ನಡವಳಿಕೆಯ ಬಗ್ಗೆ ನಾನು ಉತ್ತರಿಸುವಂತಾಗಬಾರದು, ಅದಕ್ಕಾಗಿ ಬೇರಾಗುವ ನಿರ್ಧಾರಕ್ಕೆ ಬಂದಿರುವುದಾಗಿ ಮೆಲೋನಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!