ಉತ್ತರಪ್ರದೇಶದ ಪಾಳುಬಿದ್ದ ಕೋಟೆಗಳಿಗೆ ಸಿಗಲಿದೆ ಪ್ರವಾಸಿ ಕೇಂದ್ರದ ಲುಕ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:
ಪುರಾತ್ನ ಕೋಟೆಗಳನ್ನು ಪುನರುಜ್ಜೀವನ ಗೊಳಿಸಿ ಅವುಗಳನ್ನು ಪ್ರವಾಸಿ ಕೇಂದ್ರಗಳನ್ನಾಗಿ ಪರಿವರ್ತನೆ ಮಾಡುವ ಹೊಸ ಪ್ರಯತ್ನಕ್ಕೆ ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ. ಈ ಕುರಿತು ಉತ್ತರ ಪ್ರದೆಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ರಾಜ್ಯದ ಬುಂದೇಲ್‌ಖಂಡ್ ಪ್ರದೇಶದಲ್ಲಿ ನೆಲೆಗೊಂಡಿರುವ 31 ಪುರಾತನ ಕೋಟೆಗಳನ್ನು ಪ್ರವಾಸೋದ್ಯಮದ ಹೊಸ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ಕ್ರಿಯಾ ಯೋಜನೆಯನ್ನು ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

“ಬುಂದೇಲ್‌ಖಂಡ್‌ನ ಸಂಪೂರ್ಣ ಪ್ರದೇಶವು ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ ಮತ್ತು ಅದರ ಮಹತ್ವವನ್ನು ಹೊಸ ಪೀಳಿಗೆಗೆ ತಿಳಿಸುವ ಅಗತ್ಯವಿದೆ” ಎಂದು ಯೋಗಿ ಹೇಳಿದ್ದಾರೆ. ಈ ಪ್ರದೇಶದಲ್ಲಿನ ಅನೇಕ ಕೋಟೆಗಳು ವಿಸ್ತಾರವಾದ ಸಂಕೀರ್ಣಗಳನ್ನು ಹೊಂದಿವೆ ಮತ್ತು ಅತ್ಯುತ್ತಮ ಹೋಟೆಲ್‌ಗಳಾಗಿ ರೂಪಾಂತರಿಸಲು ಅನುಕೂಲಕರವಾಗಿವೆ ಎಂದು ಅವರು ಉಲ್ಲೇಖಿಸಿದ್ದಾರೆ.

ಅನೇಕ ಕೋಟೆಗಳು ಶಿಥಿಲಾವಸ್ಥೆಯಲ್ಲಿದ್ದು, ಅವುಗಳನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸಬೇಕು ಎಂದಿರುವ ಯೋಗಿ ಆದಿತ್ಯನಾಥ್‌ ಅವರು ತಲ್ಬೆಹತ್ ಕೋಟೆ ಮತ್ತು ಬರುವಾ ಸಾಗರ್ ಸರೋವರದಲ್ಲಿರುವ ಸರೋವರಕ್ಕಾಗಿ ಜಲ ಕ್ರೀಡೆಗಳು ಮತ್ತು ಸಾಹಸ ಪ್ರವಾಸೋದ್ಯಮ ಚಟುವಟಿಕೆಗಳನ್ನು ಪ್ರಾರಂಭಿಸಲು ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಯೋಜನೆಗಳನ್ನು ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಮತ್ತು ಇದಕ್ಕೆ ಅಗತ್ಯವಿರುವ ಹಣವನ್ನು ಸರ್ಕಾರದಿಂದ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಅನಾವರಣಗೊಂಡಿರುವ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಬಳಿ ಇರುವ ಕೋಟೆಗಳಿಗೆ ಜನರು ಭೇಟಿ ನೀಡಲು ಪ್ರವಾಸೋದ್ಯಮ ಸರ್ಕ್ಯೂಟ್ ರೂಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದ ಒಂದು ವಾರದ ನಂತರ ಯೋಗಿ ಆದಿತ್ಯನಾಥ್ ಈ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!