CINE | ಪ್ಯಾನ್‌ ಇಂಡಿಯಾ ಸಿನಿಮಾಗೆ ಹೀರೋಯಿನ್‌ ಆದ ರುಕ್ಮಿಣಿ ವಸಂತ್‌, ಶಿವಕಾರ್ತಿಕೇಯನ್‌ಗೆ ಜೋಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಮರನ್ ಸಿನಿಮಾ ಬಳಿಕ ಶಿವಕಾರ್ತಿಕೇಯನ್ ಕೈಗೆತ್ತಿಕೊಂಡಿರುವ ಬಹುನಿರೀಕ್ಷಿತ ಪ್ರಾಜೆಕ್ಟ್ ಮದರಾಸಿಗೆ ನಮ್ಮ ಕನ್ನಡದ ನಟಿ ರುಕ್ಮಿಣಿ ವಸಂತ್‌ ಸಾಥ್‌ ನೀಡಿದ್ದಾರೆ.

ಆ್ಯಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಗ್ಲಿಂಪ್ಸ್‌ ಭಾರೀ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ಎ.ಆರ್. ಮುರುಗದಾಸ್ ಆ್ಯಕ್ಷನ್ ಕಟ್‌ ಹೇಳಿದ್ದು, ‘ಸಪ್ತ ಸಾಗರದಾಚೆ ಎಲ್ಲೋ’ ನಾಯಕಿ ರುಕ್ಮಿಣಿ ವಸಂತ್ ಶಿವಕಾರ್ತಿಕೇಯನ್‌ಗೆ ಜೋಡಿಯಾಗಿದ್ದಾರೆ. ಸದ್ಯ ಚಿತ್ರದ ಶೂಟಿಂಗ್‌ ಭರದಿಂದ ಸಾಗುತ್ತಿದ್ದು, ಇದೀಗ ಚಿತ್ರತಂಡ ‘ಮದರಾಸಿ’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.

ಈ ವರ್ಷ ಸೆಪ್ಟೆಂಬರ್ 5ರಂದು ‘ಮದರಾಸಿ’ ಸಿನಿಮಾ ರಿಲೀಸ್‌ ಆಗಲಿದೆ. ಸ್ಪೆಷಲ್ ಪೋಸ್ಟರ್‌ ಮೂಲಕ‌ ಚಿತ್ರತಂಡ ಬಿಡುಗಡೆ ದಿನಾಂಕ ರಿವೀಲ್‌ ಮಾಡಿದೆ. ಪೋಸ್ಟರ್‌ನಲ್ಲಿ ಶಿವಕಾರ್ತಿಕೇಯನ್‌ ಸಖತ್‌ ರಗಡ್‌ ಆಗಿ ಕಾಣಿಸಿಕೊಂಡಿದ್ದಾರೆ. ವಿದ್ಯುತ್ ಜಮ್ವಾಲ್ ಖಳನಾಯಕನಾಗಿ ಅಬ್ಬರಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!