ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಲಿಂಗಾಯತ, ಒಕ್ಕಲಿಗ, ಬ್ರಾಹ್ಮಣರ ಉಪಜಾತಿಗಳನ್ನ ಒಡೆಯುವ ಪ್ರಯತ್ನ ಮಾಡ್ತಿದ್ದಾರೆ, ಬ್ರಿಟಿಷರ ಮೆಂಟಾಲಿಟಿ ಅವರದ್ದು. ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗುತ್ತಿಲ್ಲ. ಕೇಂದ್ರದತ್ತ ಬೊಟ್ಟು ಮಾಡುವುದನ್ನು ಬಿಟ್ಟು, ನೆಟ್ಟಗೆ ಆಡಳಿತ ಮಾಡಿ ಇಲ್ಲವೇ ರಾಜೀನಾಮೆ ಕೊಡಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.
ಪ್ರತಿನಿತ್ಯ ಒಂದಲ್ಲ ಒಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದೇ ಗ್ಯಾರಂಟಿಗಳಿಂದ, ಆದ್ರೆ ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ತಲುಪುತ್ತಿಲ್ಲ, ಬಸ್ ಫ್ರೀ ಅಂತಾ ಹೇಳಿದ್ರು ಬಸ್ ನಿಲ್ಲಿಸಿದ್ರು, ಡಿಪೋದಿಂದ ಬಸ್ ಬಿಡುತ್ತಿಲ್ಲ. ಸಿದ್ದರಾಮಯ್ಯ ಯೋಜನೆಗಳು ನಿಂತಿದೆಯಾ ಎಂದು ಕೇಳಿದ್ದಾರೆ. ಹಣಕಾಸು ಇಲಾಖೆ ಇಟ್ಟುಕೊಂಡು ಸಿದ್ದರಾಮಯ್ಯ ಅವರಿಗೇ ಗೊತ್ತಿಲ್ಲ ಅಂದ್ರೆ ಹೇಗೆ? ಅಂತ ಪ್ರಶ್ನೆ ಮಾಡಿದ್ದಾರೆ.