ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ಕ್ಷೇತ್ರದಲ್ಲಿ ಮತದಾರರಿಗೆ ಲುಲು ಮಾಲ್ ಗಿಫ್ಟ್ ಕೂಪನ್‌ಗಳನ್ನು ಹಂಚಿಕೊಂಡು ಚುನಾವಣಾ ಅಕ್ರಮ ನಡೆಸಲು ಕಾಂಗ್ರೆಸ್ ಮುಂದಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಆಡಳಿತಾರೂಢ ಕಾಂಗ್ರೆಸ್ ಪಕ್ಷವು ದೊಡ್ಡ ಪ್ರಮಾಣದ ವಂಚನೆಗೆ ಸಂಚು ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಗಮನಹರಿಸಬೇಕು. ಚುನಾವಣೆ ಪಾರದರ್ಶಕವಾಗಿ ನಡೆಯಬೇಕು, ಎಲ್ಲಾ ವಾತಾವರಣವನ್ನು ಕಾಂಗ್ರೆಸ್ ಹಾಳು ಮಾಡುತ್ತಿದೆ ಎಂದು ಟೀಕಿಸಿದ್ದಾರೆ.