ನನ್ನನ್ನು ನಿಂದಿಸುವ ಸ್ಪರ್ಧೆ ನಡೆಸುತ್ತಿದ್ದಾರೆ: ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಎದುರೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್‌ನಲ್ಲಿ ನನ್ನನ್ನು ಯಾರು ಹೆಚ್ಚು ನಿಂದಿಸಬಹುದು ಎನ್ನುವ ಸ್ಪರ್ಧೆ ನಡೆಯುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಗುಜರಾತ್‌ನ ಕಲೋಲ್‌ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದು, ಗುಜರಾತ್ ನನಗೆ ನೀಡಿದ ಶಕ್ತಿ ಕಾಂಗ್ರೆಸ್‌ಗೆ ತೊಂದರೆಯಾಗಿದೆ ಎಂದಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ಅವರನ್ನು 100 ತಲೆಯ ರಾವಣ ಎಂದಿದ್ದರು. ಈ ಟೀಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆಯೂ ಪ್ರಧಾನಿ ಮೋದಿ ಮಾತನಾಡಿದ್ದು, ಖರ್ಗೆ ಅವರನ್ನು ಗೌರವಿಸುತ್ತೇನೆ. ಅವರ ಮಾತಿಕೆ ಪ್ರತಿಕ್ರಿಯೆ ಅತ್ಯಾವಶ್ಯ. ಗುಜರಾತ್ ರಾಮಭಕ್ತರ ರಾಜ್ಯ ಎನ್ನುವುದು ಕಾಂಗ್ರೆಸ್‌ಗೆ ಗೊತ್ತಿಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!