ಹೊಸದಿಗಂತ ವರದಿ,ಕಾರವಾರ :
ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ಎಸ್ ನಾಯ್ಕ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಅವರನ್ನು ಭೇಟಿ ಮಾಡಿ ಕಾರವಾರ ತಾಲೂಕಿನ ಕಾರ್ ಯೂನಿಯನ್‌ನವರು ಬಹುದಿನಗಳಿಂದ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು.
ಕಾರವಾರಕ್ಕೆ ಬರುವ ಕಾರ್ ಮಾಲಿಕರು ಬಹುದಿನಗಳಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಸಿಎಂ ಗಮನಕ್ಕೆ ತಂದ ರೂಪಾಲಿ ನಾಯ್ಕ, ಶೀಘ್ರದಲ್ಲೇ ಪರಿಹಾರೋಪಾಯಗಳನ್ನು ಮಾಡಿಕೊಡುವಂತೆ ಮನವಿ ಮಾಡಿದರು.
ಆದಷ್ಟು ಬೇಗ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಮಾಡಿಕೊಡುವುದಾಗಿ ಮುಖ್ಯಮಂತ್ರಿಗಳು ಸಭೆಯಲ್ಲಿ ಭರವಸೆ ನೀಡಿದರು.
ಕಾರ್ ಯೂನಿಯನ್‌ನವರ ಸಮಸ್ಯೆಗೆ ಸ್ಪಂದಿಸಿದ ಮುಖ್ಯಮಂತ್ರಿಗಳಿಗೆ ಸಭೆಯಲ್ಲಿ ಅಭಿನಂದನೆ ಸಲ್ಲಿಸಿದರು.
ಈ ಸಭೆಯಲ್ಲಿ ಗೋವಾ ರಾಜ್ಯ ಸರಕಾರದ ಅಧಿಕಾರಿಗಳು ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು, ಕಾರು ಯೂನಿಯನ್‌ನವರು ಉಪಸ್ಥಿತರಿದ್ದರು.