ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತದ ಬಗ್ಗೆ ದೇಶಾದ್ಯಂತ ಕಳವಳ ವ್ಯಕ್ತವಾಗಿರುವ ಕುರಿತು ಮಂಗಳವಾರ ರಾಜ್ಯಸಭೆಯಲ್ಲಿ ಸ್ಪಷ್ಟನೆ ನೀಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರೂಪಾಯಿ ಕುಸಿತ ಕಂಡಿಲ್ಲ ಬದಲಿಗೆ ಅದು ತನ್ನ ಸ್ವಾಭಾವಿಕ ಹಾದಿಯನ್ನು ಕಂಡುಕೊಳ್ಳುತ್ತಿದೆ ಎಂದು ಪ್ರತಿಪಾದಿಸಿದರು. ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ನಿರಂತರವಾಗಿ ರೂಪಾಯಿ ಮೌಲ್ಯದ ಕುರಿತು ಮೇಲ್ವಿಚಾರಣೆ ಮಾಡುತ್ತದೆ ಮತ್ತು ಚಂಚಲತೆ ಕಂಡುಬಂದರೆ ಮಾತ್ರ ಮಧ್ಯಪ್ರವೇಶಿಸುತ್ತದೆ ಎಂದು ಹೇಳಿದರು.
ಭಾರತೀಯ ರೂಪಾಯಿ ಮೌಲ್ಯವನ್ನು ನಿರ್ಧರಿಸಲು ಆರ್ಬಿಐ ಮಧ್ಯಸ್ಥಿಕೆಯ ಅಗತ್ಯವಿಲ್ಲ. ಏಕೆಂದರೆ, ಅದು ತನ್ನದೇ ಆದ ಹಾದಿಯನ್ನು ಕಂಡುಕೊಳ್ಳಲು ಮುಕ್ತವಾಗಿದೆ ಎಂದು ಸಚಿವರು ರಾಜ್ಯಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ತಿಳಿಸಿದರು.