Thursday, February 2, 2023

Latest Posts

ಬಿಗ್ ಬಾಸ್ ಟ್ರೋಫಿ ಗೆದ್ದ ರೂಪೇಶ್ ಶೆಟ್ಟಿ: ಹೊಸ ವರ್ಷ ಅದ್ಬುತವಾಗಿ ಶುರುವಾಗಿದೆ ಎಂದ ಸಾನ್ಯಾ ಅಯ್ಯರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕನ್ನಡ ಬಿಗ್ ಬಾಸ್ ಕನ್ನಡ ಸೀಸನ್ 9 ರ ವಿನ್ನರ್ ಆಗಿ ರೂಪೇಶ್ ಶೆಟ್ಟಿ ಹೊರಹೊಮ್ಮಿದ್ದಾರೆ.ಈ ಮೂಲಕ ಯಶಸ್ವಿಯಾಗಿ ಮುಕ್ತಾಯವಾಗಿದೆ.

ಬಿಗ್ ಬಾಸ್ ಗೆದ್ದು ಬೀಗುತ್ತಿರುವ ರೂಪೇಶ್ ಶೆಟ್ಟಿ ಅವರಿಗೆ ಅಭಿನಂದನೆಗಳ ಮಹಾಪೂರ ಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಎಲ್ಲರೂ ವಿಶ್ ಮಾಡುತ್ತಿದ್ದಾರೆ.

ರೂಪೇಶ್ ಶೆಟ್ಟಿ ಗೆಲುವನ್ನುಸಂಭ್ರಮಿಸಿದವರಲ್ಲಿ ನಟಿ, ಬಿಗ್ ಬಾಸ್ ಸ್ಪರ್ಧಿ ಸಾನ್ಯಾ ಅಯ್ಯರ್ ಕೂಡ ಒಬ್ಬರು. ರೂಪೇಶ್ ಗೆಲುವನ್ನು ವಿಶೇಷವಾಗಿ ಆಚರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ರೂಪೇಶ್ ಶೆಟ್ಟಿ ಜೊತೆ ಫೋಟೋ ಶೇರ್ ಮಾಡಿ ಗೆಲುವಿನ ಸಂತಸ ಹಂಚಿಕೊಂಡಿದ್ದಾರೆ. ಈ ವರ್ಷ ಅದ್ಭುತವಾಗಿ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ.

ರೂಪೇಶ್ ಶೆಟ್ಟಿ ಜೊತೆಗಿನ ಫೋಟೋ ಶೇರ್ ಮಾಡಿ, ‘ಫೋಟೋ ಬ್ಲರ್ ಆಗಿದೆ. ಖುಷಿ ನೂರಾಗಿದೆ. ಹೊಸ ವರ್ಷ ಅದ್ಬುತವಾಗಿ ಶುರುವಾಗಿದೆ’ ಎಂದು ಹೇಳಿದ್ದಾರೆ. ಬಳಿಕ ನನ್ನ ಬೆಸ್ಟ್ ಫ್ರೆಂಡ್ ವಿನ್ ಆಗಿದ್ದಾನೆ ಎಂದು ಹೇಳಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ರೂಪೇಶ್ ಶೆಟ್ಟಿ ಮತ್ತು ಸಾನ್ಯಾ ಅಯ್ಯರ್ ಸಿಕ್ಕಾಪಟ್ಟೆ ಕ್ಲೋಸ್ ಆಗಿದ್ದರು. ಇಬ್ಬರ ನಡುವೆ ಉತ್ತಮ ಬಾಂಧವ್ಯವಿತ್ತು. ಸದಾ ಜೊತೆಯಲ್ಲೇ ಕಾಣಿಸಿಕೊಳ್ಳುತ್ತಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!