Sunday, December 4, 2022

Latest Posts

ರೈತ ದಸರಾ ಕ್ರೀಡಾಕೂಟದಿಂದ ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ; ಸಚಿವ ಎಸ್.ಟಿ.ಸೋಮಶೇಖರ್

ಹೊಸದಿಗಂತ ವರದಿ ಮೈಸೂರು:

ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸಲು ರೈತ ದಸರಾ ಕ್ರೀಡಾಕೂಟ ಆಯೋಜಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಗ್ರಾಮೀಣ ದಸರಾ ಆಯೋಜಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.

ನಗರದ ಜೀವರಾಯನ ಕಟ್ಟೆ ಮೈದಾನ (ಜೆ.ಕೆ.ಗ್ರೌಂಡ್) ದಲ್ಲಿ ಆಯೋಜಿಸಿದ್ದ ರೈತ ದಸರಾ ಕ್ರೀಡಾಕೂಟ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಕೆಸರುಗದ್ದೆ ಓಟ, ಗೋಬ್ಬರ ಮೂಟೆ ಹೊತ್ತು ಓಟ, ಗೋಣಿಚೀಲ ಓಟ ಸೇರಿದಂತೆ ನಾನಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧಿಗಳು ಸಹ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷ ಅಪ್ಪಣ್ಣ, ಬಿಜೆಪಿ ನಗರ ಜಿಲ್ಲಾಧ್ಯಕ್ಷರಾದ ಶ್ರೀವತ್ಸ ಸೇರಿದಂತೆ ಹಲವು ಮುಖಂಡರು ಜೊತೆಯಲ್ಲಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!