ಉಚಿತ ಸೀರೆ, ಪಂಚೆ ಪಡೆಯಲು ನೂಕುನುಗ್ಗಲು: ಕಾಲ್ತುಳಿತದಲ್ಲಿ ನಾಲ್ವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಮಿಳುನಾಡಿನ ತಿರುಪತ್ತೂರ್ ಜಿಲ್ಲೆಯಲ್ಲಿ ಇಂದು ಕಾಲ್ತುಳಿತ ಸಂಭವಿಸಿದ್ದು ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ.

ಉಚಿತ ಸೀರೆ, ಪಂಚೆ ಮತ್ತು ಧೋತಿಗಳನ್ನು ತೆಗೆದುಕೊಳ್ಳಲು ಟೋಕನ್ ಪಡೆಯಲು ಜನರು ಸಾಲುಗಟ್ಟಿ ನಿಂತಿದ್ದರು. ಈ ವೇಳೆ ಆ ಸ್ಥಳದಲ್ಲಿ ನೂಕುನುಗ್ಗಲು ಉಂಟಾಯಿತು.

ತೈಪುಸಮಿನ್ ತಿರುಪ್ಪತ್ತೂರಿನ ವಾಣಿಯಂಬಾಡಿಯಲ್ಲಿ ವ್ಯಕ್ತಿಯೊಬ್ಬರು ಉಚಿತ ಬಟ್ಟೆಗಳನ್ನು ವಿತರಿಸುತ್ತಿದ್ದರು ಎಂದು ತಿರುಪತ್ತೂರ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಘಟನೆ ಬಗ್ಗೆ ತಮಿಳುನಾಡು ಸರ್ಕಾರ ಆಘಾತ ವ್ಯಕ್ತಪಡಿಸಿದೆ. ಈ ಕುರಿತು ಸಮಗ್ರ ತನಿಖೆಗೆ ಆದೇಶಿಸಲಾಗಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಮಾಹಿತಿ ಪಡೆದಿದ್ದಾರೆ. .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!