ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯ ಹಾಸನಾಂಬ ತಾಯಿಯ ದರುಶನಕ್ಕೆ ಜನರು ಸಾಲುಗಟ್ಟಿ ನಿಂತಿದ್ದಾರೆ. ಭಕ್ತರ ಸಂಖ್ಯೆ ಹೆಚ್ಚಾಗಿ ಜನಜಂಗುಳಿ ಏರ್ಪಟ್ಟ ಹಿನ್ನೆಲೆಯಲ್ಲಿ ಹಾಸನಾಂಬ ಆಡಳಿತ ಮಂಡಳಿಯಿಂದ ಎಲ್ಲಾ ಪಾಸ್ ರದ್ದುಮಾಡಿ ಆದೇಶಿಸಿದೆ.
ಸದ್ಯ ಸರದಿ ಸಾಲಿನಲ್ಲಿ ನಿಂತಿರುವ ಭಕ್ತರ ಪಾಸ್ ಹೊರತಾಗಿ ಬೇರೆ ಎಲ್ಲಾ ಪಾಸ್ ರದ್ದು ಮಾಡಿರುವುದಾಗಿ ತಿಳಿಸಿದೆ.
ಹಾಸನಾಂಬೆ ತಾಯಿಯ ದರುಶನದ ವೇಳೆ ನೂಕುನುಗ್ಗಲು ಉಂಟಾಗಿದೆ. ಆಡಳಿತ ಮಂಡಳಿಯಿಂದ ಬೇಕಾಬಿಟ್ಟಿ ಪಾಸ್ ಕೊಟ್ಟಿರೋದಕ್ಕೆ ಪ್ಲೆಕ್ಸ್ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಮಳೆ ಕೂಡ ದರುಶನಕ್ಕೆ ಅಡ್ಡಿಯಾದ ಕಾರಣ ಭಕ್ತರ ಆಕ್ರೋಶದ ಕಟ್ಟೆ ಹೊಡೆದಿದೆ. ಹೀಗಾಗಿ ದೇವಸ್ಥಾನದ ಬಳಿ ಹಾಕಿರುವಂತ ಪ್ಲೆಕ್ಸ್ ಹರಿದು ಆಕ್ರೋಶ ಹೊರ ಹಾಕಿದ್ದಾರೆ. ಪೊಲೀಸರು ಭಕ್ತರನ್ನು ನಿಯಂತ್ರಿಸಲು ಹರಸಾಹಸ ಪಡುವಂತೆ ಆಗಿದೆ.