ವಾಯುದಾಳಿ ಭೀತಿ: ವಿಮಾನ ನಿಲ್ದಾಣಗಳನ್ನು ಮುಚ್ಚಿದ ಉಕ್ರೇನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪೂರ್ವ ಉಕ್ರೇನ್ ಭಾಗದ ವಿಮಾನ ನಿಲ್ದಾಣಗಳನ್ನು ಉಕ್ರೇನ್ ಬಂದ್ ಮಾಡಿದೆ.
ಮಧ್ಯರಾತ್ರಿಯಿಂದ ಯಾವುದೇ ನಾಗರಿಕ ವಿಮಾನಗಳ ಹಾರಾಟಕ್ಕೆ ಅವಕಾಶ ನೀಡಿಲ್ಲ. ರಷ್ಯಾದಿಂದ ಸಂಭಾವ್ಯ ವಾಯುದಾಳಿ ಹಿನ್ನೆಲೆಯಲ್ಲಿ ಉಕ್ರೇನ್ ಸರ್ಕಾರ ಈ ಕ್ರಮ ಕೈಗೊಂಡಿದೆ.

ದೇಶದ ಪೂರ್ವಭಾಗದಲ್ಲಿರುವ ವಾಯುವಲಯವನ್ನು ಅಪಾಯ ಪ್ರದೇಶ ಎಂದು ಅಧಿಕಾರಿಗಳು ಗುರುತಿಸಿದ್ದು, ಈ ವಾಯುಪ್ರದೇಶವನ್ನು ರಷ್ಯಾ ತನ್ನ ಸುಪರ್ದಿಗೆ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇದರಿಂದಾಗಿ ಉಕ್ರೇನ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಈಗಾಗಲೇ ರಷ್ಯಾ ತನ್ನ ಆಕ್ರಮಣ ನೀತಿ ನಿಲ್ಲಿಸುವಂತೆ ವಿಶ್ವಸಂಸ್ಥೆ ಮನವಿ ಮಾಡಿದೆ. ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ರಷ್ಯಾ ಗೆ ಹಲವು ರೀತಿಯಲ್ಲಿ ಆರ್ಥಿಕ ನಿರ್ಬಂಧ ವಿಧಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!