ʼಆಪರೇಷನ್‌ ಸಿಂದೂರʼ ಭಾರತ-ಪಾಕ್‌ ಉದ್ವಿಗ್ನತೆ ಉಲ್ಬಣದ ಬಗ್ಗೆ ರಷ್ಯಾ ಕಳವಳ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಹಲ್ಗಾಂ ಉಗ್ರದಾಳಿಗೆ ಉತ್ತರವಾಗಿ ಭಾರತ ‘ಆಪರೇಷನ್‌ ಸಿಂದೂರ್‌’ ನಡೆಸಿ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದ ಬೆನ್ನಲ್ಲೇ ಉಭಯ ದೇಶಗಳ ಸೇನೆ ಮುಖಾಮುಖಿಯಾಗಿ ಉದ್ವಿಗ್ನತೆ ಉಲ್ಬಣಗೊಳ್ಳುತ್ತಿರುವ ಬಗ್ಗೆ ರಷ್ಯಾ ಕಳವಳ ವ್ಯಕ್ತಪಡಿಸಿದೆ.

ಪಹಲ್ಗಾಂ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ಸೇನೆ ಮುಖಾಮುಖಿಯಾಗುತ್ತಿರುವ ಬಗ್ಗೆ ನಾವು ತೀವ್ರ ಕಳವಳಗೊಂಡಿದ್ದೇವೆ ಎಂದು ರಷ್ಯಾದ ವಿದೇಶಾಂಗ ಇಲಾಖೆಯ ವಕ್ತಾರೆ ಮಾರಿಯಾ ಜಖರೋವಾ ಹೇಳಿದ್ದಾರೆ.

ಪರಿಸ್ಥಿತಿ ಹದಗೆಡದಂತೆ ತಡೆಯಲು ಸಂಯಮದಿಂದ ವರ್ತಿಸುವಂತೆ ನಾವು ಎರಡೂ ದೇಶಗಳಿಗೆ ಕರೆ ನೀಡುತ್ತೇವೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಮಸ್ಯೆಗಳನ್ನು ಶಾಂತಿಯುತವಾಗಿ ರಾಜಕೀಯ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ, 1972ರ ಶಿಮ್ಲಾ ಒಪ್ಪಂದ ಮತ್ತು 1999ರ ಲಾಹೋರ್‌ ಒಪ್ಪಂದದನುಸಾರ ಬಗೆಹರಿಸಿಕೊಳ್ಳಬೇಕು ಎಂದು ಆಶಿಸುತ್ತೇವೆ ಎಂದಿರುವುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಇದೇ ವೇಳೆ, ರಷ್ಯಾ ಉಗ್ರಕೃತ್ಯಗಳನ್ನು ಬಲವಾಗಿ ಖಂಡಿಸುತ್ತದೆ. ಈ ದುಷ್ಟತನದ ವಿರುದ್ಧ ಇಡೀ ವಿಶ್ವ ಸಮುದಾಯದ ಯತ್ನವನ್ನು ಒಗ್ಗೂಡಿಸುವ ಅಗತ್ಯವನ್ನು ಒತ್ತಿಹೇಳುತ್ತದೆ ಎಂದೂ ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!