ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ರಷ್ಯ: ಶಾಂತಿ ಕಾಪಾಡಲು ವಿಶ್ವಸಂಸ್ಥೆಯಲ್ಲಿ ಭಾರತ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಕ್ರೇನ್-ರಷ್ಯ ಉದ್ವಿಗ್ನತೆ ಶಮನಕ್ಕೆ ಸಂಬಂಧಪಟ್ಟವರು ತುರ್ತು ಕ್ರಮ ಕೈಗೊಳ್ಳಬೇಕು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಭಾರತದ ರಾಯಭಾರಿ ಟಿ.ಎಸ್. ತಿರುಮೂರ್ತಿ ಹೇಳಿದ್ದಾರೆ.

ಈ ವಿಷಯದಲ್ಲಿ ಅಂತಾರಾಷ್ಟ್ರೀಯ ಸಮುದಾಯವು ಸೂಕ್ತ ಕ್ರಮಗಳನ್ನು ತೆಗೆದುಕೊಂಡಿಲ್ಲ. ಪರಿಸ್ಥಿತಿ ಬಿಕ್ಕಟ್ಟಿಗೆ ತಿರುಗುವ ಸೂಚನೆಯಲ್ಲಿದೆ. ಎಚ್ಚರಿಕೆಯಿಂದ ಮುಂದಿನ ಹೆಜ್ಜೆ ಇಡದಿದ್ದರೆ ಪರಿಣಾಮ ಬೇರೆಯೇ ಆಗಿರಲಿದೆ. ದೇಶಗಳು ಶಾಂತಿ ಕಾಪಾಡಬೇಕು ಎಂದಿದ್ದಾರೆ.

ಉಕ್ರೇನ್ ವಿರುದ್ಧ ರಷ್ಯ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ಧ ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಯುನೈಟೆಡ್ ನೇಷನ್ಸ್ ಸೆಕ್ಯುರಿಟಿ ಕೌನ್ಸಿಲ್ ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ತುರ್ತು ಅಧಿವೇಶನ ನಡೆಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here