ಗ್ಯಾಸ್‌ ಸ್ಟೇಷನ್‌ನಲ್ಲಿ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 27ಕ್ಕೆ ಏರಿಕೆ, 100 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಷ್ಯಾದ ಗ್ಯಾಸ್ ಸ್ಟೇಷನ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿದೆ. ಈ ಕುರಿತು ಅಲ್ಲಿನ ಮಾಧ್ಯಮವೊಂದು ಮಾಹಿತಿ ನೀಡಿದ್ದು, ಈ ಅವಘಡಲ್ಲಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಮಾಡಿದೆ.

ರಷ್ಯಾದ ಕಾಕಸಸ್ ರಿಪಬ್ಲಿಕ್ ಆಫ್ ಡಾಗೆಸ್ತಾನ್‌ನಲ್ಲಿರುವ ಮಖಚ್ಕಲಾದಲ್ಲಿನ ಗ್ಯಾಸ್ ಫಿಲ್ಲಿಂಗ್ ಸ್ಟೇಷನ್‌ನಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟದಿಂದ ಈವರೆಗೆ 27 ಜನರು ಸಾವನ್ನಪ್ಪಿದ್ದು, 102 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರ ಪೈಕಿ ಮೂರು ಮಕ್ಕಳು ಸೇರಿದ್ದಾರೆ ಎಂದು ವರದಿಯಾಗಿದೆ.

ಕಾರುಗಳು ನಿಲ್ಲಿಸಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ಗ್ಯಾಸ್‌ ಸ್ಟೇಷನ್‌ಗೂ ಬೆಂಕಿ ವ್ಯಾಪಿಸಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಈ ಅವಘಡದಿಂದಾಗಿ 600 ಚದರ ಮೀಟರ್ ಪ್ರದೇಶದವರೆಗೂ ಬೆಂಕಿ ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಧ್ಯಮಗಳ ವರದಿಯ ಪ್ರಕಾರ, ಎಂಟು ಇಂಧನ ಟ್ಯಾಂಕ್‌ಗಳಲ್ಲಿ ಎರಡು ಟ್ಯಾಂಕರ್‌ಗಳು ಸ್ಫೋಟಗೊಂಡಿವೆ. ಇದೀಗ 70 ಕ್ಕೂ ಹೆಚ್ಚು ಜನರು ಮತ್ತು 20 ಉಪಕರಣಗಳು ಬೆಂಕಿಯನ್ನು ನಿಯಂತ್ರಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ. ಎರಡನೇ ಸ್ಫೋಟದ ಅಪಾಯವಿರುವುದರಿಂದ ಪೊಲೀಸರು ಮತ್ತು ನಗರ ಅಧಿಕಾರಿಗಳು ಜನರನ್ನು ಸ್ಥಳಾಂತರಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!