ಉಕ್ರೇನ್ ಮೇಲೆ ರಷ್ಯಾ ವೈಮಾನಿಕ ದಾಳಿ: 17 ಮಂದಿ ಮೃತ್ಯು, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪೂರ್ವ ಉಕ್ರೇನ್ ನ ಕೊಸ್ಟಿಯಾಂಟಿನಾವ್ಕ ನಗರದಲ್ಲಿನ ಮಾರುಕಟ್ಟೆಯ ಮೇಲೆ ರಷ್ಯಾ ವೈಮಾನಿಕ ದಾಳಿ ನಡೆಸಿದ ಪರಿಣಾಮ 17 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಬುಧವಾರ ನಡೆದಿದೆ.

ಜನಸಂದಣಿ ಇರುವ ಪ್ರದೇಶಗಳ ಮೇಲೆ ದಾಳಿ ನಡಸಿದ ಪರಿಣಾಮ ಸಾವು ನೋವುಗಳು ಸಂಭವಿಸಿದೆ. ಅಲ್ಲದೆ ಘಟನೆಯಲ್ಲಿ ಹಲವಾರು ಅಂಗಡಿಗಳು ಸುಟ್ಟು ಭಸ್ಮವಾಗಿವೆ.

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಕೀವ್ ನಗರಕ್ಕೆ ಭೇಟಿ ನೀಡಿದ ವೇಳೆ ಈ ದಾಳಿ ನಡೆದಿದೆ. ʼಇದು ರಷ್ಯದ ದುಷ್ಕೃತ್ಯ, ಆದಷ್ಟು ಬೇಗ ಇದಕ್ಕೆ ಉತ್ತರ ನೀಡಬೇಕುʼ ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್‌ಸ್ಕಿ ಖಂಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!