ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ ಜೊತೆಗಿನ ಸಂಘರ್ಷ ಕೊನೆಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ರಷ್ಯಾ ಸಿದ್ಧವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೂರವಾಣಿ ಮೂಲಕ ಮಾತುಕತೆ ನಡೆಸಿ ಯುದ್ಧ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ ಇಬ್ಬರೂ ಸಹ ಯುದ್ಧ ಸೂಕ್ಷ್ಮತೆಗಳ ಕುರಿತು ಚರ್ಚಿಸಿದ್ದಾರೆ.
ಮಾತುಕತೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪುಟಿನ್, ಟ್ರಂಪ್ ಅವರ ಜೊತೆಗಿನ ಇಂದಿನ ಮಾತುಕತೆ ತುಂಬಾ ಉಪಯುಕ್ತವಾಗಿತ್ತು. ಮಾಸ್ಕೋ ಮತ್ತು ಕೈವ್ ನಡುವಿನ ನೇರ ಸಂವಾದವನ್ನು ಪುನರಾರಂಭಿಸಲು ಸಹಾಯ ಮಾಡಿದ್ದಕ್ಕಾಗಿ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ಉಕ್ರೇನ್‌ನೊಂದಿಗೆ ಭವಿಷ್ಯದ ಶಾಂತಿ ಒಪ್ಪಂದಕ್ಕೆ ರಷ್ಯಾ ಸಿದ್ಧವಾಗಿದೆ. ನಿರೀಕ್ಷಿತ ಒಪ್ಪಂದಗಳನ್ನ ತಲುಪಿದರೆ ಉಕ್ರೇನ್‌ನೊಂದಿಗೆ ಕದನ ವಿರಾಮ ಸಾಧ್ಯ ಎಂದು ತಿಳಿಸಿದ್ದಾರೆ.