ರಷ್ಯಾ ಪ್ರತೀಕಾರ ದಾಳಿ: ನಮ್ಮ ಸೈನಿಕರು ಮೃತಪಟ್ಟಿಲ್ಲ ಎಂದ ಉಕ್ರೇನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಷ್ಯಾ ಉಕ್ರೇನ್ ಮೇಲೆ ಪ್ರತೀಕಾರ ಕ್ಷಿಪಣಿ ದಾಳಿ ನಡೆಸಿದ್ದು, 600 ಕ್ಕೂ ಹೆಚ್ಚು ಉಕ್ರೇನ್ ಸೈನಿಕರನ್ನು ಕೊಂದಿರುವುದಾಗಿ ಹೇಳಿತ್ತು. ಆದರೆ ಇದೀಗ ಉಕ್ರೇನ್ ಇದನ್ನು ನಿರಾಕರಿಸಿದ್ದು, ನಮ್ಮ ಸೈನಿಕರು ಮೃತಪಟ್ಟಿಲ್ಲ ಎಂದು ಹೇಳಿದೆ.

ಕ್ರಾಮಾಟೋರ್ಸ್‌ನಲ್ಲಿರುವ ಎರಡು ಬ್ಯಾರಕ್‌ಗಳಿಗೆ ನಮ್ಮ ಕ್ಷಿಪಣಿ ಅಪ್ಪಳಿಸಿದ್ದು, 600ಕ್ಕೂ ಹೆಚ್ಚು ಸೈನಿಕರು ಮೃತಪಟ್ಟಿದ್ದಾರೆ ಎಂದು ರಷ್ಯಾದ ರಕ್ಷಣಾ ಸಚಿವಾಲಯದ ವಕ್ತಾರ ಇಗೊರ್ ಕೊನಾಶೆಂಕೋವ್ ಹೇಳಿದ್ದಾರೆ.

ಆದರೆ ರಷ್ಯಾ ದಾಳಿ ನಡೆಸಿದ್ದು ನಿಜ, ಕಟ್ಟಡಗಳಿಗೆ ಹಾನಿಯಾಗಿದೆ, ಸೈನಿಕರಿಗೆ ಹಾನಿಯಾಗಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

ರಷ್ಯಾ ಜಗತ್ತಿನ ಮುಂದೆ ಸುಳ್ಳು ಹೇಳಿ ತನ್ನತ್ತ ಎಲ್ಲರನ್ನೂ ಸೆಳೆಯಲು ನೋಡುತ್ತಿದೆ. ಪರಿಸ್ಥಿತಿ ಸುಧಾರಿಸುವ ಬದಲು ಇನ್ನಷ್ಟು ಹದಗೆಡುವಂತೆ ಮಾಡುತ್ತಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!