ರಷ್ಯಾ ಮೇಲೆ ನಿರ್ಬಂಧ ಹೇರಲು ಮುಂದಾದ ಅಮೆರಿಕ: ಕದನ ವಿರಾಮ ಘೋಷಿಸುತ್ತಾ ರಷ್ಯಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಷ್ಯಾ ಬಂಡುಕೋರರ ಹಿಡಿತದಲ್ಲಿರುವ ಉಕ್ರೇನ್‌ ನ ಪೂರ್ವದಲ್ಲಿರುವ ಎರಡು ಪ್ರದೇಶಗಳನ್ನು ಸ್ವತಂತ್ರ ಎಂದು ಘೋಷಿಸಲು ಮುಂದಾಗಿರುವ ರಷ್ಯಾಕ್ಕೆ ಅಮೆರಿಕ ಬಿಸಿ ಮುಟ್ಟಿಸಿದೆ.
ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ರಷ್ಯಾ ಮೇಲೆ ಹೊಸ ನಿರ್ಬಂಧಗಳನ್ನು ವಿಧಿಸಲು ನಿರ್ಧಾರ ಮಾಡಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರ ಘೋಷಣೆಯನ್ನು ವಿರೋಧಿಸಿದ ಅಮೆರಿಕ ರಷ್ಯಾ ಅಂತಾರಾಷ್ಟ್ರೀಯ ಬದ್ಧತೆಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕರೆದಿದೆ.
ಉಕ್ರೇನ್‌ ನ ಎರಡು ಪ್ರದೇಶಗಳಲ್ಲಿ ಹೊಸ ಹೂಡಿಕೆ, ವ್ಯಾಪರಗಳ ಮೇಲೆ ನಿರ್ಬಂಧ ಹೇರಲು ಅಮೆರಿಕ ಮುಂದಾಗಿದೆ.
ಇನ್ನು ಉಕ್ರೇನ್‌ ಬಿಕ್ಕಟ್ಟು ನಿವಾರಣೆ ಮಾಡಲು ಫ್ರಾನ್ಸ್‌ ಹಾಗೂ ರಷ್ಯಾ ಕದನ ವಿರಾಮ ಘೋಷಿಸಲು ನಿರ್ಧರಿಸಿರುವ ಬಗ್ಗೆ ಮಾಹಿತಿ ಕೇಳಿ ಬರುತ್ತಿದೆ. ಈಗಾಗಲೇ ಎರಡೂ ದೇಶಗಳ ನಾಯಕರು ಪರಸ್ಪರ ಚರ್ಚೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!