ಇಂದು ಮೋದಿ- ಜೋ ಬಿಡೆನ್ ಮಹತ್ವದ ಸಭೆ; ಯಾವೆಲ್ಲಾ ವಿಚಾರಗಳು ಪ್ರಮುಖವಾಗಿ ಚರ್ಚೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬಿಡನ್ ಸೋಮವಾರ ಮಧ್ಯಾಹ್ನ ವರ್ಚುವಲ್ ಸಭೆಯಲ್ಲಿ ಭೇಟಿಯಾಗಲಿದ್ದಾರೆ. ಈ ವೇಳೆಉಕ್ರೇನ್ ಮೇಲೆ ರಷ್ಯಾದ ಮಿಲಿಟರಿ ಕ್ರಮವನ್ನು ಚರ್ಚಿಸುವ ಸಾಧ್ಯತೆಗಳಿವೆ. ಉಕ್ರೇನ್-ರಷ್ಯಾ ನಡುವಿನ ಯುದ್ಧದಲ್ಲಿ ಭಾರತ ತಟಸ್ಥ ನಿಲುವು ಹೊಂದಿರುವುದರಿಂದ ಅಮೆರಿಕ ಪದೇ ಪದೇ ಆಕ್ಷೇಪ ವ್ಯಕ್ತಪಡಿಸಿದೆ. ಇದರ ಜೊತೆಗೆ, ರಷ್ಯಾದಿಂದ ತೈಲ ಖರೀದಿ ಬಗ್ಗೆ ಯುಎಸ್ ಅಧ್ಯಕ್ಷ ಜೋ ಬಿಡೆನ್ ಭಾರತದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಾಗಾಗಿ ಇಂದು ಇಬ್ಬರು ನಾಯಕರ ವರ್ಚುವಲ್ ಭೇಟಿ ಕುತೂಹಲ ಮೂಡಿಸಿದೆ. ರಷ್ಯಾ ವಿರುದ್ಧ ತಟಸ್ಥ ನಿಲುವು ತೊರೆಯುವಂತೆ ಉಕ್ರೇನ್ ಭಾರತವನ್ನು ಒತ್ತಾಯಿಸಿದೆ ಉಕ್ರೇನ್ ಬೆಂಬಲಕ್ಕೆ ನಿಂತು ರಷ್ಯಾ ಸೈನಿಕರ ದೌರ್ಜನ್ಯ ತಡೆಯಲು ಸಹಕರಿಸುವಂತೆ ಜೋ ಬಿಡೆನ್ ಪ್ರಧಾನಿ ಮೋದಿ ಅವರನ್ನು ಕೋರುವ ಸಾಧ್ಯತೆ ಇದೆ.
ಮತ್ತೊಂದೆಡೆ, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರ ಮತ್ತು ಇಂಡೋ-ಪೆಸಿಫಿಕ್ ವಲಯದಲ್ಲಿ ಸಹಕಾರದ ಬಗ್ಗೆ ಚರ್ಚಿಸಲಾಗುವುದು. ಕೋವಿಡ್-‌19 ರೋಗದ ಬಗ್ಗೆ ಅಂತರರಾಷ್ಟ್ರೀಯ ಆರ್ಥಿಕತೆಯನ್ನು ಬಲಪಡಿಸುವುದು, ಅಂತರರಾಷ್ಟ್ರೀಯ ಭದ್ರತೆ ಮತ್ತು ಪ್ರಜಾಪ್ರಭುತ್ವದಂತಹ ವಿಷಯಗಳ ಬಗ್ಗೆ ಪ್ರಧಾನಿ ಮೋದಿ ಮತ್ತು ಬಿಡೆನ್ ಗಮನಹರಿಸಲಿದ್ದಾರೆ.
ಇವರ ಭೇಟಿ ಬಳಿಕ ಉಭಯ ದೇಶಗಳ ರಕ್ಷಣಾ ಮತ್ತು ವಿದೇಶಾಂಗ ಸಚಿವರು ವಾಷಿಂಗ್ಟನ್‌ನಲ್ಲಿ ಮುಖಾಮುಖಿ ಮಾತುಕತೆ ನಡೆಸಲಿದ್ದಾರೆ. ಈಗಾಗಲೇ ಭಾರತದ ವಿದೇಶಾಂಗ ಸಚಿವ ಜೈ ಶಂಕರ್‌ ಹಾಗೂ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ವಾಷಿಂಗ್‌ಟನ್‌ನಲ್ಲಿ ಉಪಸ್ಥಿತರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!