ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ನಿಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವ ಸಲಹೆಯನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಹೇಳಿದ್ದಾರೆ.
ಭಾರತಕ್ಕೆ ಭೇಟಿ ನೀಡುವ ಮೊದಲು ಮಾತನಾಡಿದ ಗುಟೆರೆಸ್, ರಷ್ಯಾ-ಉಕ್ರೇನ್ ಯುದ್ಧದ ಉಲ್ಬಣದ ಬಗ್ಗೆ ಅತ್ಯಂತ ಕಾಳಜಿ ಇದೆ. ಯುದ್ಧದಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಬಲಿಯಾಗುತ್ತಿದು, ಈಗಾಗಲೇ ಪರಿಸ್ಥಿತಿ ಹದಗೆಟ್ಟಿದೆ ವಿಶ್ವಸಂಸ್ಥೆಯಿಂದ ಉಕ್ರೇನ್ ಸಂಘರ್ಷಕ್ಕೆ ಪರಿಹಾರಕ್ಕಾಗಿ ಪರಿಸ್ಥಿತಿಗಳನ್ನು ಸೃಷ್ಟಿಸುವ ಎಲ್ಲಾ ಪ್ರಯತ್ನಗಳನ್ನು ಮಾಡುವುದಾಗಿ ಅವರು ಹೇಳಿದ್ದಾರೆ.
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ನಿಲ್ಲಿಸಬೇಕು. ಇದು ಯುದ್ಧದ ಯುಗವಲ್ಲ ಎಂದು ಪ್ರಧಾನಿ ಮೋದಿ ಅವರು ಜಾಗತಿಕ ವೇದಿಕೆಯಲ್ಲಿ ಸಲಹೆ ನೀಡಿದ್ದರು.