ರಷ್ಯಾದ ಬ್ಯುಸಿನೆಸ್​ ಸೆಂಟರ್ ಗೆ ಬೆಂಕಿ: 125 ಜನರ ರಕ್ಷಣೆ, ಹಲವರು ಸಿಲುಕಿರುವ ಶಂಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಷ್ಯಾ ರಾಜಧಾನಿ ಮಾಸ್ಕೋದ ಬ್ಯುಸಿನೆಸ್​ ಸೆಂಟರ್​​ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬೆಂಕಿ ನಂದಿಸಲು ಕಾರ್ಯದಲ್ಲಿ 180 ಅಗ್ನಿಶಾಮಕದ ಸಿಬ್ಬಂದಿ ತೊಡಗಿಸಿಕೊಂಡಿದ್ದು, ಜನರನ್ನು ರಕ್ಷಣೆ ಮಾಡಲು ಮೂರು ಹೆಲಿಕಾಪ್ಟರ್‌ಗಳನ್ನು ಬಳಕೆ ಮಾಡಲಾಗುತ್ತಿದೆ.
ಬೆಂಕಿ ಕಾಣಸಿಕೊಂಡ ಕಟ್ಟಡದಿಂದ ಇದುವರೆಗೆ 125 ಜನರನ್ನು ರಕ್ಷಿಸಲಾಗಿದೆ. ಇದರಲ್ಲಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಈ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ನಿಖರ ಕಾರಣ ಇನ್ನೂ ಗೊತ್ತಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!