February 16, 2026
Monday, February 16, 2026
spot_img

ಉಕ್ರೇನ್‌ ರೈಲಿನ ಮೇಲೆ ರಷ್ಯಾ ಡ್ರೋನ್ ದಾಳಿ: 30 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಕ್ರೇನ್‌ನ ಸುಮಿಯಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ರಷ್ಯಾ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಿಂದ 30 ಜನ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಿಳಿಸಿದ್ದಾರೆ.

ರಷ್ಯಾ ದಾಳಿಯ ವಿಡಿಯೋವನ್ನು ಝೆಲೆನ್ಸ್ಕಿ X ನಲ್ಲಿ ಪೋಸ್ಟ್ ಮಾಡಿದ್ದಾರೆ. ವಿಡಿಯೋದಲ್ಲಿ ಹಾನಿಗೊಳಗಾದ ರೈಲಿನಲ್ಲಿ ಬೆಂಕಿಯ ಜ್ಯಾಲೆಗಳು ಬರುತ್ತಿರುವುದು ಸೆರೆಯಾಗಿದೆ. ಘಟನಾ ಸ್ಥಳದಲ್ಲಿ ಜನರ ರಕ್ಷಣಾ ಕಾರ್ಯ ನಡೆಯುತ್ತಿದೆ. ಗಾಯಾಳುಗಳ ಬಗ್ಗೆ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಇಲ್ಲಿಯವರೆಗೆ, ಕನಿಷ್ಠ 30 ಮಂದಿ ಸಾವಿಗೀಡಾಗಿದ್ದಾರೆ.

‘ರಷ್ಯಾ ವಿರುದ್ಧ ಬಲವಾದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೇ ರಷ್ಯನ್ನರಿಗೆ ತಾವು ನಾಗರಿಕರನ್ನು ಕೊಲ್ಲುತ್ತಿದ್ದೇವೆ ಎಂದು ತಿಳಿದಿರಲು ಸಾಧ್ಯವಿಲ್ಲ. ಪ್ರತಿದಿನ ರಷ್ಯಾ ಮುಗ್ದ ಜನರ ಜೀವಗಳನ್ನು ತೆಗೆದುಕೊಳ್ಳುತ್ತಿದೆ. ಇದನ್ನು ಜಗತ್ತು ನಿರ್ಲಕ್ಷಿಸಬಾರದು, ಇದೊಂದು ಭಯೋತ್ಪಾದನಾ ಕೃತ್ಯ’ ಎಂದು ಕರೆದಿದ್ದಾರೆ.

ಗವರ್ನರ್ ಹ್ರೈಹೊರೊವ್ ಎಕ್ಸ್‌ನಲ್ಲಿ ಉರಿಯುತ್ತಿರುವ ರೈಲು ಬೋಗಿಯ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ ವೈದ್ಯರು ಮತ್ತು ರಕ್ಷಣಾ ಅಧಿಕಾರಿಗಳು ಇದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !