ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ ಮೇಲೆ ರಷ್ಯಾದ ಯುದ್ಧ ಇನ್ನು ಮುಂದುವರಿದಿದ್ದು, ಈಗಾಗಲೇ ಉಭಯ ರಾಷ್ಟ್ರಗಳ ಸಾವಿರಾರು ಜನ ಮೃತಪಟ್ಟಿದ್ದಾರೆ. ಈ ನಡುವೆ ಬ್ರಿಟನ್ ಮತ್ತು ಜರ್ಮನಿ ಸೇರಿ 36 ದೇಶಗಳ ವಿಮಾನ ಹಾರಾಟವನ್ನು ರಷ್ಯಾ ನಿಷೇಧಿಸಿದೆ.
ಯುರೋಪಿಯನ್ ಒಕ್ಕೂಟದ ರಾಷ್ಟ್ರಗಳು ಈಗಾಗಲೇ ರಷ್ಯಾದ ವಿಮಾನಗಳಿಗೆ ನಿಷೇಧ ಹೇರಿವೆ. ಯುರೋಪಿಯನ್ ರಾಷ್ಟ್ರಗಳು ನಿಷೇಧ ಹೇರಿದ್ದಕ್ಕೆ ಪ್ರತೀಕಾರವಾಗಿ ರಷ್ಯಾ 27 ಯುರೋಪಿಯನ್ ರಾಷ್ಟ್ರಗಳು ಸೇರಿ ಒಟ್ಟು 36 ದೇಶಗಳ ಮೇಲೆ ಈ ನಿರ್ಬಂಧ ಹೇರಿದೆ.
ಅಲ್ಬೇನಿಯಾ, ಅಂಗುಯಿಲಾ, ಆಸ್ಟ್ರಿಯಾ, ಬೆಲ್ಜಿಯಂ, ಬಲ್ಗೇರಿಯಾ, ಬ್ರಿಟಿಷ್ ವರ್ಜಿನ್ ದ್ವೀಪಗಳು, ಜರ್ಮನಿ, ಜಿಬ್ರಾಲ್ಟರ್, ಹಂಗೇರಿ, ಗ್ರೀಸ್, ಡೆನ್ಮಾರ್ಕ್, ಕೆನಡಾ, ಕ್ರೊಯೇಷಿಯಾ, ಸೈಪ್ರಸ್, ಜೆಕ್ ರಿಪಬ್ಲಿಕ್, ಎಸ್ಟೋನಿಯಾ, ಫಿನ್ಲ್ಯಾಂಡ್, ಫ್ರಾನ್ಸ್, ಜರ್ಸಿ, ಐರ್ಲೆಂಡ್, ಐಸ್ಲ್ಯಾಂಡ್, ಇಟಲಿ, ಲಾಟ್ವಿಯಾ, ಲಿಥುವೇನಿಯಾ, ಲಕ್ಸೆಂಬರ್ಗ್, ಮಾಲ್ಟಾ, ನೆದರ್ಲ್ಯಾಂಡ್ಸ್, ನಾರ್ವೆ, ಪೋಲೆಂಡ್, ಪೋರ್ಚುಗಲ್, ರೊಮೇನಿಯಾ, ಸ್ಲೋವಾಕಿಯಾ, ಸ್ಲೊವೇನಿಯಾ, ಸ್ಪೇನ್, ಸ್ವೀಡನ್ ಮತ್ತು ಯುಕೆ ವಿಮಾನಗಳ ಮೇಲೆ ನಿರ್ಬಂಧ ಹೇರಲಾಗಿದೆ.
ಆದರೆ, ತುರ್ತು ಪರಿಸ್ಥಿತಿಯಲ್ಲಿ ವಿಶೇಷ ಅನುಮತಿಯೊಂದಿಗೆ ಮಾತ್ರ ರಷ್ಯಾದ ವಾಯುಪ್ರದೇಶವನ್ನು ಪ್ರವೇಶಿಸಬಹುದಾಗಿದೆ.