Friday, March 31, 2023

Latest Posts

ಭಾರತದಲ್ಲಿ ನಡೆಯಲಿರುವ ಜಿ20 ವಿದೇಶಾಂಗ ಸಚಿವರ ಸಭೆಯಲ್ಲಿ ರಷ್ಯಾದ ಎಫ್‌ಎಂ ಲಾವ್ರೊವ್ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಾರ್ಚ್ ತಿಂಗಳಲ್ಲಿ ನವದೆಹಲಿಯಲ್ಲಿ ನಡೆಯಲಿರುವ ಜಿ20 ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಲು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ರಷ್ಯಾದ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಟ್ವಿಟರ್‌ನಲ್ಲಿ ರಶ್ಯದ ವಿದೇಶಾಂಗ ಸಚಿವಾಲಯ, ಲಾವ್ರೊವ್ ಅವರು ಮಾರ್ಚ್ 1 ರಿಂದ 3ರ ವರೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ.

ಬಾಂಗ್ಲಾದೇಶ, ಈಜಿಪ್ಟ್, ಮಾರಿಷಸ್, ನೆದರ್ಲ್ಯಾಂಡ್ಸ್, ನೈಜೀರಿಯಾ, ಓಮನ್, ಸಿಂಗಾಪುರ್, ಸ್ಪೇನ್ ಮತ್ತು ಯುಎಇ ಭಾರತದ ವಿಶೇಷ ಆಹ್ವಾನಿತ ಅತಿಥಿ ರಾಷ್ಟ್ರಗಳಾಗಿವೆ. ಭಾರತವು ದೇಶಾದ್ಯಂತ ಹಲವಾರು ನಗರಗಳಲ್ಲಿ G20 ಸಭೆಗಳನ್ನು ಆಯೋಜಿಸುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!