ಉಕ್ರೇನ್ ನ ಸುಮಿ ಮೇಲೆ ರಷ್ಯಾ ಕ್ಷಿಪಣಿ ದಾಳಿ: 30ಕ್ಕೂ ಅಧಿಕ ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಕ್ರೇನ್ ನ ಸುಮಿ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ 31 ಜನರು ಸಾವನ್ನಪ್ಪಿದ್ದಾರೆ. 80 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ನ ಆಂತರಿಕ ಸಚಿವ ಇಹೋರ್ ಕ್ಲಿಮೆಂಕೊ ಹೇಳಿದ್ದಾರೆ.

ಸ್ಥಳೀಯರು ಪಾಮ್ ಸಂಡೆ ಆಚರಿಸಲು ಒಟ್ಟು ಸೇರಿದ್ದ ಕ್ಷಣ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳು ಹೃದಯಭಾಗಕ್ಕೆ ಅಪ್ಪಳಿಸಿದವು. ಇದರಿಂದ ನಮ್ಮ ಸಮುದಾಯವು ಭೀಕರ ದುರಂತವನ್ನು ಅನುಭವಿಸಿದೆ .

https://x.com/ZelenskyyUa/status/1911374394422669409

ಇತ್ತ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಈ ದಾಳಿಯನ್ನು ಖಂಡಿಸಿದ್ದು, ರಷ್ಯಾದ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಯ ನಂತರ ಸುಮಿಯಲ್ಲಿ ಇಲ್ಲಿಯವರೆಗೆ 31 ಜನರು ಸಾವನ್ನಪ್ಪಿದ್ದಾರೆ. ಸತ್ತವರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. ಅವರ ಕುಟುಂಬಗಳು ಮತ್ತು ಪ್ರೀತಿಪಾತ್ರರಿಗೆ ನನ್ನ ಸಂತಾಪಗಳು. ಹತ್ತು ಮಕ್ಕಳು ಸೇರಿದಂತೆ 80 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜಗತ್ತಿನ ಪ್ರತಿಯೊಬ್ಬರೂ ಮೌನವಾಗಿರಬಾರದು, ಅಸಡ್ಡೆ ತೋರಬಾರದು ಎಂಬುದು ಬಹಳ ಮುಖ್ಯ. ರಷ್ಯಾದ ದಾಳಿಗಳು ಖಂಡನೆಗೆ ಮಾತ್ರ ಅರ್ಹವಾಗಿವೆ. ಯುದ್ಧವನ್ನು ಕೊನೆಗೊಳಿಸಲು ಮತ್ತು ಜನರ ಸುರಕ್ಷತೆಯನ್ನು ಖಾತರಿಪಡಿಸಲು ರಷ್ಯಾದ ಮೇಲೆ ಒತ್ತಡದ ಅಗತ್ಯವಿದೆ ಎಂದು ಹೇಳಿದ್ದಾರೆ.

ಶನಿವಾರ ಮುಂಜಾನೆ ಉಕ್ರೇನ್‌ನ ಕೀವ್‌ನಲ್ಲಿರುವ ಭಾರತೀಯ ಔಷಧ ಕಂಪನಿಯ ಗೋದಾಮಿನ ಮೇಲೆ ರಷ್ಯಾದ ಕ್ಷಿಪಣಿ ದಾಳಿ ನಡೆಸಿತ್ತು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!